ಕುವೆಂಪು ವಿವಿ ಕುಲಪತಿ ಹಾಗೂ ಇತರ ಇಬ್ಬರು ಅಧಿಕಾರಿಗಳ ವಿರುದ್ದ ತನಿಖೆಗೆ ರಾಜ್ಯ ರಾಜ್ಯ ಸರ್ಕಾರ ಆದೇಶ

ಶಿವಮೊಗ್ಗ(ಜೂ 03): ಕುವೆಂಪು ವಿವಿ ಕುಲಪತಿ ಹಾಗೂ ಇತರ ಇಬ್ಬರು ಅಧಿಕಾರಿಗಳ ವಿರುದ್ದ ತನಿಖೆಗೆ ರಾಜ್ಯ ರಾಜ್ಯ ಸರ್ಕಾರ ಆದೇಶ ಮಾಡಿದ್ದು ನಿವೃತ್ತ ನ್ಯಾಯಾದೀಶರೊಬ್ಬರ ಅಧ್ಯಕ್ಷತೆಯಲ್ಲಿ ತನಿಖಾ ಸಮಿತಿಯನ್ನು ರಚನೆ ಮಾಡಿದೆ. ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಕುಲಸಚಿವ (ಪರೀಕ್ಷಾಂಗ) ಹಾಗೂ ಕುವೆಂಪು ವಿಶ್ವವಿದ್ಯಾಲಯದ ದೂರ ಶಿಕ್ಷಣ ವಿಭಾಗದ ನಿರ್ದೇಶಕರ ವಿರುದ್ದ ತನಿಖೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

ಏನು ಪ್ರಕರಣ: 2019ರಲ್ಲಿ ದೂರ ಶಿಕ್ಷಣದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಕುವೆಂಪು ವಿವಿ ಫಲಿತಾಂಶ ಪ್ರಕಟಿಸಿತ್ತು. ಪ್ರಥಮ ಮತ್ತು ದ್ವಿತೀಯ ವರ್ಷದ ಸ್ನಾತಕ ಮತ್ತು ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಫಲಿತಾಂಶ ನೀಡಿದ್ದ ವಿಶ್ವವಿದ್ಯಾಲಯ. ಈ ಬಗ್ಗೆ ಸಿಂಡಿಕೇಟ್ ಸದಸ್ಯ ಸಂತೋಷ್ ಬಳ್ಳಕೆರೆ ಹಾಗೂ ಆರ್ಟಿಐ ಕಾರ್ಯಕರ್ತ ಗಜಾನನ ದಾಸ್ ಕೆ.ಜಿ ಹಾಗೂ ಎಸ್.ಎಂ ಮಹಾದೇವಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದರು.

ಆನೆ ದಂತ ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಗಳ ಬಂಧನ: ಕೋಟ್ಯಾಂತರ ರೂಪಾಯಿ ಮೌಲ್ಯದ ದಂತ ವಶಕ್ಕೆ

ಕುವೆಂಪು ವಿವಿ ಕುಲಪತಿ, ಕುಲಸಚಿವ (ಮೌಲ್ಯಮಾಪನ) ಹಾಗೂ ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕನ ವಿರುದ್ಧ FIR ದಾಖಲಿಸುವಂತೆ ಹಾಗೂ ರಾಜ್ಯಪಾಲರ ಅಧೀನ ಕಾರ್ಯದರ್ಶಿಯಿಂದ ತನಿಖೆ ನಡೆಸುವಂತೆ ಸರ್ಕಾರ ಆದೇಸ ನೀಡಿದೆ. ಅಲ್ಲದೆ ನಿವೃತ್ತ ನ್ಯಾಯಾದೀಶರೊಬ್ಬರ ಅಧ್ಯಕ್ಷತೆಯಲ್ಲಿ ತನಿಖಾ ಸಮಿತಿಯನ್ನು ರಚಿಸಿ ವರದಿ ನೀಡುವಂತೆ ಆದೇಶ ನೀಡಿದ್ದು ಶಿವಮೊಗ್ಗದ ನಿವೃತ್ತ ನ್ಯಾಯಾದೀಶರಾದ ರವೀಂದ್ರನಾಥ್ ಹೆಚ್.ಬಿ ಅಧ್ಯಕ್ಷನಾಗಿ ನೇಮಕ ಮಾಡಿ ಎಂದು ಆದೇಶ ಹೊಡಡಿಸಿದ್ದು 20 ದಿನದಲ್ಲಿ ಸರ್ಕಾರಕ್ಕೆ ವರದಿ ನೀಡುವಂತೆ ಆದೇಶ ಹೊರಡಿಸಲಾಗಿದೆ.

ತನಿಖೆಗೆ ಆದೇಶಿಸಿರುವ ಆದೇಶ ಪ್ರತಿ

Related posts

Leave a Comment