ತ್ಯಾಮಗೊಂಡ್ಲು ಲಕ್ಶ್ಮಿನಾರಾಯಣ ಟಿ ಎನ್ ರವರಿಗೆ ಡಾಕ್ಟರೇಟ್ ಪದವಿ.

ನೆಲಮಂಗಲ: ತ್ಯಾಮಗೊಂಡ್ಲು ಗ್ರಾಮದ ನಿವಾಸಿಗಳಾದ ನರಸಿಂಹಮೂರ್ತಿ.ಎಲ್ ಮತ್ತು ಲಕ್ಷ್ಮಮ್ಮ ದಂಪತಿಗಳ ಪುತ್ರರಾದ ಮತ್ತು ತುಮಕೂರಿನ ಶ್ರೀ ಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಿನಾರಾಯಣ ಟಿ ಎನ್ ರವರಿಗೆ ತುಮಕೂರು ವಿಶ್ವವಿದ್ಯಾನಿಲಯ ಡಾಕ್ಟರ್ ಆಫ್ ಫಿಲಾಸಫಿ ಪದವಿಯನ್ನು ಘೋಷಿಸಿದೆ.

ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಚಿಕ್ಕಣ್ಣರವರ ಮಾರ್ಗದರ್ಶನದಲ್ಲಿ ಮಂಡಿಸಿದ “ಆದಿಚುಂಚನಗಿರಿ ಕ್ಷೇತ್ರವು ಮಹಿಳಾ ಸಬಲೀಕರಣಕ್ಕಾಗಿ ನೀಡಿರುವ ಕೊಡುಗೆಗಳು” ಎಂಬ ವಿಷಯದ ಮೇಲಿನ  ಸಂಶೋಧನಾ ಮಹಾ ಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾನಿಲಯ ಪಿಎಚ್‌ಡಿ ಪ್ರಧಾನ ಮಾಡಿ ಗೌರವಿಸಿದೆ. ಗ್ರಾಮಸ್ಥರು ಮತ್ತು ವಿದ್ಯಾರ್ಥಿ ವೃಂದ, ಪ್ರಾಧ್ಯಾಪಕ ವರ್ಗದವರು ಲಕ್ಷ್ಮಿನಾರಾಯಣರನ್ನು ಅಭಿನಂದಿಸಿದ್ದಾರೆ.

Related posts

Leave a Comment