ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರೈತ ಮುಖಂಡರು ಮತ್ತು ಹೋರಾಟಗಾರರ ಜತೆ ಸುದೀರ್ಘ ಚರ್ಚೆ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಜಾನುವಾರು ಹತ್ಯೆ ಕಾಯ್ದೆ ತಿದ್ದುಪಡಿ ಮೊದಲಾದವುಗಳ ಮರುಪರಿಶೀಲನೆ ಮಾಡಲಾಗುವುದು ಎಂದು ಸಿಎಂ‌ ಸಿದ್ದರಾಮಯ್ಯ ತಿಳಿಸಿದಿದ್ದಾರೆ.

ಇಂದು ಮುಖ್ಯಮಂತ್ರಿಗಳನ್ನ ಹಲವು ರೈತ ಮುಖಂಡರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರವು ಕಾರ್ಪೊರೇಟ್‌ ಕೃಷಿಯನ್ನು ಪರಿಚಯಿಸುವುದರಿಂದ ಶೇ. 85 ಕ್ಕೂ ಹೆಚ್ಚಿನ ಪ್ರಮಾಣದಲ್ಲಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತೊಂದರೆಯಾಗಲಿದೆ ಎಂದು ಮುಖ್ಯಮಂತ್ರಿಗಳ ಮುಂದೆ  ರೈತ ಮುಖಂಡರು ಆತಂಕ ವ್ಯಕ್ತಪಡಿಸಿದ್ದರು.

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ನೀತಿ, ನಿಯಮಾವಳಿಗಳ ಕುರಿತು ವಿವರವಾಗಿ ಪ್ರತ್ಯೇಕವಾಗಿ ಚರ್ಚಿಸಲು ಪ್ರತ್ಯೇಕ ಸಭೆ ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಬಡಗಲಪುರ ನಾಗೇಂದ್ರ, ಚಾಮರಸ ಮಾಲಿ ಪಾಟೀಲ್, ಜಿ.ಸು.ಬೈಯ್ಯಾ ರೆಡ್ಡಿ , ಎಚ್.ಆರ್.ಬಸವರಾಜಪ್ಪ ನೇತೃತ್ವದ ರೈತ ಮುಖಂಡರ ನಿಯೋಗ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿದ್ದರು.

Related posts

Leave a Comment