2 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಬಿದ್ದ ಪಿಡಿಓ -Digital Varthe

ನೆಲಮಂಗಲ (ಜೂ08): ಭೂಮಿ ಖಾತೆ ಮಾಡಿಕೊಡಲು ಸಾರ್ವಜನಿಕರಿಂದ 2 ಲಕ್ಷ ಲಂಚಕ್ಕೆ ಭೇಡಿಕೆ ಇಟ್ಟಿದ್ದ ಭ್ರಷ್ಟ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎನ್. ನರಸಿಂಹಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಅಗಳಕುಪ್ಪೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಖಾರಿ ಎನ್.ನರಸಿಂಹಮೂರ್ತಿ ಸಾರ್ವಜನಿಕರೊಬ್ಬರಿಗೆ ಖಾತೆ ಮಾಡಿಕೊಡಲು 2 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು, ಈ ಹಣವನ್ನ ಇಂದು ನೆಲಮಂಗಲ ಪರಿವೀಕ್ಷಣ ಮಂದಿರ ಬಳಿ ಇಂದು ತಂದು ಕೊಡಲು ತಿಳಿಸಿದ್ದರು.

ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಸರಣಿ ಕಳ್ಳತನ

ಪಿಡಿಒ ಲಂಚಕ್ಕೆ ಭೇಡಿಕೆ ಇಟ್ಟಿದ್ದ ವಿಚಾರವನ್ನ ಲೋಕಾಯುಕ್ತರಿಗೆ ದೂರು ನೀಡಲಾಗಿತ್ತು, ದೂರಿನನ್ವಯ ಲೋಕಾಯುಕ್ತ ಡಿವೈಎಸ್‌ಪಿ ರೇಣುಕಾಪ್ರಸಾದ್‌ ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಪಿಡಿಒ ನರಸಿಂಹಮೂರ್ತಿ ಲೋಕಾ ಬಲೆಗೆ ಬಿದ್ದಿದ್ದಾರೆ.

Related posts

5 Thoughts to “2 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಬಿದ್ದ ಪಿಡಿಓ -Digital Varthe”

Leave a Comment