ಇತ್ತೀಚೆಗೆ ಸಿನಿ ಲೋಕದಲ್ಲಿ ವಿಚ್ಛೇದನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಪ್ರತಿದಿನ ಒಬ್ಬ ಅಥವಾ ಇಬ್ಬರು ಸೆಲೆಬ್ರಿಟಿಗಳ ದಾಂಪತ್ಯ ಬಿರುಕು ಸುದ್ದಿಗಳು ಕೇಳಿ ಬರುತ್ತಿವೆ. ಇದೀಗ ಆ ಸಾಲಿಗೆ ಸ್ಯಾಂಡಲ್‌ವುಡ್ ನಟ ಅಜಯ್ ರಾವ್ ಕೂಡ ಸೇರಿಕೊಂಡಿದ್ದಾರೆ.
ನಟ ಅಜಯ್ ರಾವ್ ಅವರ ಪತ್ನಿ ಸಪ್ನಾ (ಸ್ವಪ್ನಾ ರಾವ್) ವಿಚ್ಛೇದನಕ್ಕಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ವಿಷಯ ಇದೀಗ ಚರ್ಚೆಗೆ ಗ್ರಾಸವಾಗಿದೆ.
2014ರ ಡಿಸೆಂಬರ್ 18ರಂದು ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ ಇತ್ತೀಚೆಗೆ ಹೊಸ ಮನೆಗೆ ಗೃಹಪ್ರವೇಶ ಮಾಡಿ ಸಂಭ್ರಮಿಸಿದ್ರು. ಆದರೆ ಸಂತೋಷ ಹೆಚ್ಚು ದಿನ ಉಳಿಯದೆ, ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ.
ಸಪ್ನಾ ರಾವ್ ಅಜಯ್ ರಾವ್ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ (Domestic Violence Act) ಅಡಿ ದೂರು ದಾಖಲಿಸಿದ್ದಾರೆ. ಅಷ್ಟೇ ಅಲ್ಲದೆ, ಇವರ ಪುತ್ರಿ ಚರಿಷ್ಮಾ ಸಹ ತಂದೆ ವಿರುದ್ಧ ದೂರು ದಾಖಲಿಸಿರುವುದಾಗಿ ವರದಿಯಾಗಿದೆ.
11 ವರ್ಷಗಳ ದಾಂಪತ್ಯದ ಬಳಿಕ ಈ ಜೋಡಿ ದೂರಾಗಲು ನಿರ್ಧರಿಸಿರುವುದು ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಸುದ್ದಿಯಾಗಿದೆ.ದೆ.