ಧರ್ಮಸ್ಥಳ ಪ್ರಕರಣದಲ್ಲಿ ಯಾರ ಮೇಲೆ ಯಾವ ರೀತಿಯ ಕ್ರಮ ಬೇಕೋ, ಯಾವ ಕಾನೂನು ಅನ್ವಯಿಸಬೇಕೋ ಅದನ್ನೇ ಕೈಗೊಳ್ಳುತ್ತೇವೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಯಾರ ಮೇಲೆ ಯಾವ ರೀತಿಯ ಕ್ರಮ ಬೇಕೋ, ಯಾವ ಕಾನೂನು ಅನ್ವಯಿಸಬೇಕೋ ಅದನ್ನೇ ಕೈಗೊಳ್ಳುತ್ತೇವೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಧರ್ಮಸ್ಥಳದ ಬಗ್ಗೆ ಸುಳ್ಳು ಆರೋಪ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಜವಾಬ್ದಾರಿಯುತ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದ್ದು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ. ತನಿಖೆಯ ನಂತರ ಎಲ್ಲ ಸತ್ಯಾಂಶಗಳು ಹೊರಬರುತ್ತವೆ ಎಂದು ಅವರು ವಿರೋಧ ಪಕ್ಷಗಳಿಗೆ ತಿಳಿಸಿದ್ದಾರೆ.

ಡಿಕೆಶಿ ಹೇಳಿದರು – “ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು ಧರ್ಮದಲ್ಲಿ ರಾಜಕಾರಣ ಇರಬಾರದು.”

ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿಗಳ ಸೂಚನೆ ನೀಡಲಾಗಿದೆ. ಸರ್ಕಾರ ಕ್ರಮಕ್ಕೆ ಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು. “ಯಾರಿಗೆ ಯಾವ ರೀತಿ ಬಲಿ ತೆಗೆದುಕೊಳ್ಳಬೇಕೋ, ಯಾವ ಕಾನೂನು ಬಳಸಬೇಕೋ ಅದನ್ನೇ ಮಾಡಲಾಗುತ್ತದೆ” ಎಂದರು.

ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು, “ಜವಾಬ್ದಾರಿಯುತ ದಕ್ಷ ಹಿರಿಯ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ. ಅಧಿಕಾರಿಗಳ ಮೇಲೆ ನಮಗೆ ನಂಬಿಕೆಯಿದೆ. ಮುಖ್ಯಮಂತ್ರಿಗಳು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ತೆರಳಿ ಪ್ರತಿವರ್ಷ ಚಿಕಿತ್ಸೆ ಪಡೆದುಕೊಂಡು ಬಂದಿದ್ದಾರೆ. ಅವರಿಗೂ ಆ ಕ್ಷೇತ್ರದ ಮೇಲೆ ನಂಬಿಕೆಯಿದೆ. ಸಿಎಲ್‌ಪಿ ಸಭೆಯಲ್ಲಿ ಶಾಸಕರಾದ ಶಿವಲಿಂಗೇಗೌಡರು ಹಾಗೂ ಬೇಳೂರು ಗೋಪಾಲಕೃಷ್ಣ ಅವರು ಪ್ರಸ್ತಾಪಿಸಿದಾಗ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ” ಎಂದರು.

ಪ್ರತಿಪಕ್ಷಗಳತ್ತ ಮುಖ ಮಾಡಿ ಡಿಕೆಶಿ ಹೇಳಿದರು – “ಧರ್ಮಸ್ಥಳ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಹ ಸೂಚನೆ ನೀಡಿದ್ದಾರೆ. ಯಾರಿಗೆ ಯಾವ ರೀತಿ ಬಲಿ ತೆಗೆದುಕೊಳ್ಳಬೇಕೋ, ಯಾವ ಕಾನೂನು ಬಳಸಬೇಕೋ ಅದನ್ನು ಮಾಡಲಾಗುತ್ತದೆ. ಗೃಹಸಚಿವರು ಇದಕ್ಕೆ ಬದ್ಧರಾಗಿದ್ದಾರೆ. ಈ ವಿಚಾರದಲ್ಲಿ ಒಂದೆರಡು ದಿನ ಸುಮ್ಮನಿರಿ. ನೀವೆಲ್ಲರೂ ತಾಳ್ಮೆವಹಿಸಿ.”

ಅವರು ಟೀಕಿಸಿ ಹೇಳಿದರು – “ಪ್ರತಿಪಕ್ಷದವರು ಮೊದಲೇ ಎಸ್‌ಐಟಿ ರಚನೆ ಬೇಡ ಎಂದು ಹೇಳಬೇಕಿತ್ತು. ಆದರೆ ಹದಿನೈದು ದಿನ ಕಳೆದ ನಂತರ ಹೇಳುತ್ತಾ ಇದ್ದೀರಿ. ಈ ವಿಚಾರದಲ್ಲಿ ಮೊದಲು ನೀವು ಮಾತನಾಡಿಯೇ ಇಲ್ಲ. ದಿನಬೆಳಗಾದರೆ ನಿಮ್ಮ (ಪ್ರತಿಪಕ್ಷಗಳ ನಾಯಕರು) ಮುಖ್ಯಮಂತ್ರಿಗಳ ಮೇಲೆ, ನನ್ನ ಮೇಲೆ ಸೇರಿದಂತೆ ಅನೇಕರ ಮೇಲೆ ಯಾರೋ ಒಬ್ಬ ಆಪಾದನೆ ಮಾಡಿದ್ದಾರೆ. ಇದರಲ್ಲಿ ಷಡ್ಯಂತ್ರ ಇರಬಹುದು. ಇದೆಲ್ಲವೂ ಆಚೆ ಬರಬೇಕು. ಅದಕ್ಕಾಗಿ ಗೃಹಸಚಿವರು ಕಾನೂನಿನ ಅಡಿ ಕೆಲಸ ಮಾಡುತ್ತಿದ್ದಾರೆ.”

Spread the love

Leave a Reply

Your email address will not be published. Required fields are marked *