ನೆಲಮಂಗಲ: ಲೋಕಾಯುಕ್ತರ ಬಲೆಗೆ ಗ್ರಾಮ ಪಂಚಾಯತಿ ಪಿಡಿಒ

ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತಿ ಪಿಡಿಒ ಗೀತಾಮಣಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ನಿವೇಶನದ ಖಾತೆ ಮಾಡಿಕೊಡುವುದಕ್ಕಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪಿಡಿಒ ಗೀತಾಮಣಿ ಸ್ವತಃ ಹಣ ಸ್ವೀಕರಿಸುವ ಬದಲು ಮೂರನೇ ವ್ಯಕ್ತಿಯೊಬ್ಬರಿಗೆ ಹಣ ನೀಡುವಂತೆ ಸೂಚಿಸಿದ್ದರೆಂದು ತಿಳಿದುಬಂದಿದೆ. ಅದರಂತೆ ದೂರುದಾರರು ಹಣ ನೀಡಲು ಮುಂದಾದಾಗ, ಪಿಡಿಒ ಸೂಚಿಸಿದ್ದ ವ್ಯಕ್ತಿಯನ್ನು ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ.

ಹಣ ಹಸ್ತಾಂತರವಾಗುವ ಕ್ಷಣದಲ್ಲೇ ದಾಳಿ ನಡೆಸಿದ ಲೋಕಾಯುಕ್ತ ತಂಡ, ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಲಂಚದ ಹಣವನ್ನು ವಶಪಡಿಸಿಕೊಂಡಿದೆ.

ಈ ಕಾರ್ಯಾಚರಣೆ ಲೋಕಾಯುಕ್ತ ಡಿವೈಎಸ್‌ಪಿ ಗೌತಮ್ ಅವರ ನೇತೃತ್ವದಲ್ಲಿ ನಡೆಯಿದ್ದು, ಎಸ್‌ಪಿ ಮಹಾಂತೇಶ್ವರ ಜಿದ್ದಿ ಅವರ ಮಾರ್ಗದರ್ಶನದಲ್ಲಿ ಟ್ರ್ಯಾಪ್ ಯಶಸ್ವಿಯಾಗಿದೆ.

ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಇನ್ನಷ್ಟು ಮಾಹಿತಿಯನ್ನು ಲೋಕಾಯುಕ್ತ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.

Spread the love

Leave a Reply

Your email address will not be published. Required fields are marked *