ಬೆಂಗಳೂರು: ಬೆಂಗಳೂರಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 34 ವರ್ಷದ ಟೆಕ್ಕಿ ಪೂಜಾ ದತ್ತಾ ಅವರ ಸಾವು ಪ್ರಕರಣಕ್ಕೆ ಆರು ತಿಂಗಳ ಬಳಿಕ ಮಹತ್ವದ ಬೆಳವಣಿಗೆ ನಡೆದಿದೆ. ಜಾರ್ಖಂಡ್ ಮೂಲದ ಪೂಜಾ ಅವರು ತಮ್ಮ ಬಾಡಿಗೆ ಮನೆಯಲ್ಲೇ ಬೆತ್ತಲೆಯಾಗಿ ಮೃತಪಟ್ಟು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದೀಗ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿಯ ಆಧಾರದ ಮೇಲೆ ಪೊಲೀಸರು ಅಂತಿಮ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಶ್ವಾಸಕೋಶದ ವೈಫಲ್ಯ ಸಾವಿಗೆ ಕಾರಣ

ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2026ರ ಏಪ್ರಿಲ್ 27ರಂದು ಪೂಜಾ ದತ್ತಾ ಅವರ ಮೃತದೇಹ ಪತ್ತೆಯಾಗಿತ್ತು. ಮನೆಯೊಳಗಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಮೃತದೇಹ ಬೆತ್ತಲೆಯಾಗಿ ಪತ್ತೆಯಾಗಿದ್ದ ರೀತಿ, ಮನೆಯ ಗೋಡೆಗಳ ಮೇಲೆ ಕಾಗದಗಳಲ್ಲಿ ಬರೆಯಲಾಗಿದ್ದ ಬರಹಗಳು ಹಾಗೂ ಯುವಕನೊಬ್ಬ ಮನೆಗೆ ಬಂದು ಹೋಗುತ್ತಿದ್ದ ಎಂಬ ಮಾಹಿತಿ ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು.

ಎಫ್‌ಎಸ್‌ಎಲ್ ವರದಿ ಆಧರಿಸಿ ಅಂತಿಮ ವರದಿ

ತನಿಖೆಯ ಭಾಗವಾಗಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನು ಪರಿಶೀಲಿಸಿದ ಪೊಲೀಸರು, ಪೂಜಾ ದತ್ತಾ ಅವರ ಸಾವಿಗೆ ಶ್ವಾಸಕೋಶದ ವೈಫಲ್ಯ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಿ ಅಂತಿಮ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆರಂಭದಲ್ಲಿ ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದ ಈ ಪ್ರಕರಣದಲ್ಲಿ, ಆರು ತಿಂಗಳ ಬಳಿಕ ತನಿಖಾ ವರದಿ ಸಲ್ಲಿಕೆಯಾಗಿರುವುದು ಪ್ರಮುಖ ಬೆಳವಣಿಗೆಯಾಗಿದೆ.

Spread the love

Leave a Reply

Your email address will not be published. Required fields are marked *