ನೆಲಮಂಗಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿ ಆವರಣದಲ್ಲಿ ನೆಲಮಂಗಲ ತಾಲೂಕು ಘಟಕದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
ನೆಲಮಂಗಲ ತಾಲೂಕು ಘಟಕದ ಅಧ್ಯಕ್ಷರಾಗಿ ಚುನಾಯಿತರಾದ ಅಭಿಷೇಕ್ ಡಿ.ಆರ್., ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದ ಸುಮಿತ್ರಾದೇವಿ ಎನ್. ಹಾಗೂ ಉಪಾಧ್ಯಕ್ಷ ಮರಿಯಪ್ಪ ಅವರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಕಾರ್ಯದರ್ಶಿ ರುದ್ರೇಶ್ ಹೆಚ್.ಸಿ., ಖಜಾಂಚಿ ಶಾಂತರಾಜು ಜಿ.ಎಸ್. ಮತ್ತು ಕಾರ್ಯಕಾರಿ ಸಮಿತಿ ಸದಸ್ಯ ಪ್ರದೀಪ್ ಕುಮಾರ್ ಅವರ ಪ್ರಮಾಣಪತ್ರಗಳನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ರಮೇಶ್ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಮಂಜುನಾಥ್ ಸೂಲಿಬೆಲೆ ಉಪಸ್ಥಿತರಿದ್ದರು. ಚುನಾವಣಾಧಿಕಾರಿಗಳಾದ ರಫೀಉಲ್ಲಾ ಮತ್ತು ಜಿ.ಎಸ್. ಮಂಜುನಾಥ್, ಜಿಲ್ಲಾ ನಿರ್ದೇಶಕರಾದ ರಂಗನಾಥ್, ಜಯಲಕ್ಷ್ಮಿ ಹಾಗೂ ಸದಸ್ಯರಾದ ರಾಜಶೇಖರ್, ಎನ್.ಎಸ್. ಮೂರ್ತಿ, ತ್ರಿವಿಕ್ರಮ, ನಾರಾಯಣಸ್ವಾಮಿ ಮತ್ತು ರವಿಪ್ರಕಾಶ್ ಸೇರಿದಂತೆ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನೂತನ ಪದಾಧಿಕಾರಿಗಳು ಸಂಘದ ನಿಯಮಾವಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಪತ್ರಕರ್ತರ ಹಿತಾಸಕ್ತಿ ಕಾಪಾಡಲು, ಸಂಘದ ಒಗ್ಗಟ್ಟು ಮತ್ತು ಬೆಳವಣಿಗೆಗೆ ಶ್ರಮಿಸುವ ಸಂಕಲ್ಪ ವ್ಯಕ್ತಪಡಿಸಿದರು.
