ಕೃಷ್ಣರಾಜಪೇಟೆ: ಹಿಂದೂಗಳ ಪವಿತ್ರ ಗ್ರಂಥವಾದ ರಾಮಾಯಣ ಮಹಾ ಕಾವ್ಯದ ಕರ್ತೃ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜೀವನಾದರ್ಶಗಳು ಆರೋಗ್ಯವಂತ ಜೀವನಕ್ಕೆ ದಾರಿ ದೀಪವಾಗಿವೆ ಎಂದು ಶಾಸಕ ಹೆಚ್.ಟಿ.ಮಂಜು ಹೇಳಿದರು.

ಅವರು ತಾಲ್ಲೂಕು ಆಡಳಿತವು ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೇಡನಾಗಿದ್ದ ರತ್ನಾಕರ ಜೀವನದಲ್ಲಿ ಬದಲಾವಣೆ ಹೊಂದುವ ಮೂಲಕ ಮಹಾಕವಿ ವಾಲ್ಮೀಕಿಯಾಗಿ ರಾಮಾಯಣ ಮಹಾ ಕಾವ್ಯವನ್ನು ರಚಿಸಿ ನಾಡಿಗೆ ಕೊಡುಗೆಯಾಗಿ ನೀಡಿದ ಮಹಾನ್ ಸಂತರಾಗಿದ್ದಾರೆ. ಬದಲಾವಣೆ ಜಗದ ನಿಯಮವಾಗಿದ್ದು, ನಾಗರೀಕ ಸಮಾಜದಲ್ಲಿ ವಾಸಮಾಡುವ ಪ್ರತಿಯೊಬ್ಬರೂ ತಮ್ಮ ತಮ್ಮ ಪಾಲಿನ ಕೆಲಸಗಳನ್ನು ಬದ್ಧತೆಯಿಂದ ಮಾಡುವ ಮೂಲಕ ಸದೃಢ ಸಶಕ್ತ ಭಾರತದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕ ಮಂಜು ಕರೆ ನೀಡಿದರು.

ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ನಾಗೇಂದ್ರಕುಮಾರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿ ಮಹರ್ಷಿ ವಾಲ್ಮೀಕಿ ಅವರ ಜೀವನದ ಸಂದೇಶಗಳು ಬದಲಾವಣೆಯ ದಿಕ್ಕಿನಲ್ಲಿ ಸಾಗಲು ದಾರಿ ಮಾರ್ಗವಾಗಿವೆ ಎಂದು ಹೇಳಿದರು.

ವಿಶ್ರಾಂತ ಪ್ರಾಂಶುಪಾಲ ನರಸನಾಯಕ, ಪಿಎಲ್ ಡಿ ಬ್ಯಾಂಕಿನ ಅಧ್ಯಕ್ಷ ರಾಜಾನಾಯಕ, ಸ್ವಾಭಿಮಾನಿ ಕೃಷ್ಣರಾಜಪೇಟೆ ತಾಲ್ಲೂಕು ನಾಯಕ ಸಂಘದ ಪ್ರಧಾನ ಕಾರ್ಯದರ್ಶಿ ಜಿ ಪಿ ರಾಜು. ತಹಶೀಲ್ದಾರ್ ಶ್ರೇಯಸ್, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸುಷ್ಮಾ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಅಶೋಕ್ ಕುಮಾರ್.ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಗಾಯತ್ರಿ, ಬಿಇಓ ತಿಮ್ಮೇಗೌಡ, ಸಂಪನ್ಮೂಲ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ಡಾ. ಸುಗುಣ. ಮುಖಂಡರಾದ ಶಿವಣ್ಣ, ಡಾ.ವೆಂಕಟೇಶ್. ಸಿವಿಲ್ ಇಂಜಿನಿಯರ್ ಗೋವಿಂದಸ್ವಾಮಿ. ಟಿಎಪಿಸಿಎಂಎಸ್ ನಿರ್ದೇಶಕ ಮಂಜುನಾಥ್. ಸಮಾಜದ ಮುಖಂಡರಾದ ರೇವಣ್ಣ. ಹೇಮಂತ್ ಕುಮಾರ್. ತಮ್ಮಯ್ಯ. ಕೃಷ್ಣಣ್ಣ. ರಾಮಕೃಷ್ಣ. ನಾಗಣ್ಣ.ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪಟ್ಟಣದ ಮುಖ್ಯ ರಸ್ತೆಯಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರವನ್ನು ತೆರೆದ ವಾಹನದಲ್ಲಿ ಅಲಂಕರಿಸಿ ಜಾನಪದ ಕಲಾ ತಂಡಗಳ ವೈಭವದ ಮೆರವಣಿಗೆಯೊಂದಿಗೆ ವೇದಿಕೆಗೆ ತರಲಾಯಿತು.

Spread the love

Leave a Reply

Your email address will not be published. Required fields are marked *