ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮುಂದುವರಿದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ನಡೆದ ಸಂಧಾನ ಸಭೆ ಯಾವುದೇ ಅಂತಿಮ ನಿರ್ಧಾರವಿಲ್ಲದೆ ಮುಕ್ತಾಯಗೊಂಡಿದೆ.

ಸುವರ್ಣ ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದರು. ರೈತರ ಅಹವಾಲು ಆಲಿಸಿದ ಅವರು, ನಿರ್ಧಾರ ಕೈಗೊಳ್ಳಲು ಸಮಯಾವಕಾಶ ಬೇಕೆಂದು ತಿಳಿಸಿದ್ದಾರೆ. ಆದರೆ, ಪ್ರತಿ ಟನ್ ಕಬ್ಬಿಗೆ ₹1,000 ಪ್ರೋತ್ಸಾಹಧನ ಘೋಷಿಸಬೇಕೆಂದು ರೈತರು ಪಟ್ಟು ಹಿಡಿದಿದ್ದಾರೆ.

ಸಭೆಯ ಬಳಿಕ ಮಾತನಾಡಿದ ರೈತ ಮುಖಂಡ ಚೂನಪ್ಪ ಪೂಜಾರಿ, ಸರ್ಕಾರ ಶೀಘ್ರ ನಿರ್ಧಾರ ಕೈಗೊಳ್ಳದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು. ಕರ್ನಾಟಕ ಬಂದ್ ಸೇರಿದಂತೆ ವಿವಿಧ ರೀತಿಯ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಕಬ್ಬಿನ ದರ ನಿಗದಿಯಾಗುವವರೆಗೂ ಕಾರ್ಖಾನೆಗಳನ್ನು ನಡೆಸಲು ಬಿಡುವುದಿಲ್ಲ ಎಂದಿದ್ದಾರೆ.

ಇದೇ ವೇಳೆ, ಪ್ರೋತ್ಸಾಹಧನದ ಮೊತ್ತದ ವಿಚಾರವಾಗಿ ಸಭೆಯಲ್ಲಿ ರೈತರ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಟ ನಡೆದಿದೆ ಎನ್ನಲಾಗಿದೆ. ಅಧಿಕಾರಿಗಳು ಹಾಗೂ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ರೈತರೊಳಗಿನ ಗಲಾಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿ, ಒಗ್ಗಟ್ಟಿನಿಂದ ಹೋರಾಟ ನಡೆಸುವಂತೆ ಸಲಹೆ ನೀಡಿದ್ದಾರೆ.

Spread the love

Leave a Reply

Your email address will not be published. Required fields are marked *