ನೆಲಮಂಗಲ: ವಿದ್ಯಾರ್ಥಿಗಳ ಈ ಸಾಧನೆ ಒಂದೆರಡು ದಿನಗಳ ಪರಿಶ್ರಮದ ಫಲವಲ್ಲ. ನಿರಂತರ ಅಧ್ಯಯನ, ಶಿಸ್ತು ಹಾಗೂ ಉಪನ್ಯಾಸಕರ ಮಾರ್ಗದರ್ಶನದಿಂದ ಇಂತಹ ಯಶಸ್ಸು ಸಾಧ್ಯವಾಗಿದೆ ಎಂದು ಹೊಯ್ಸಳ ಪಿಯು ಕಾಲೇಜಿನ ಮುಖ್ಯಸ್ಥರಾದ ರಾಮಕೃಷ್ಣಪ್ಪ ತಿಳಿಸಿದರು.

ನಗರದ ಶಿವನಗರದಲ್ಲಿರು ಹೊಯ್ಸಳ ಪಿಯು ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರದ ಪ್ರತಿಷ್ಠಿತ ಸಂಸ್ಥೆಯಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS), ನಾಗಪುರಕ್ಕೆ ಪ್ರವೇಶ ಪಡೆಯುವ ಮೂಲಕ ನೆಲಮಂಗಲದ ವಿದ್ಯಾರ್ಥಿ ದರ್ಶನ್ ಮಂಜುನಾಥ್ ಗೌಡ ಹಾಗೂ ರಾಜ್ಯಮಟ್ಟದಲ್ಲಿ ಮೂರನೇ ಸ್ಥಾನ ಪಡೆದ ವಿದ್ಯಾರ್ಥಿನಿ ಬಿಂದು ಅವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಸಂಸ್ಥೆಯ ವತಿಯಿಂದ ತಲ್ಲಾ ₹1 ಲಕ್ಷ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಈ ವೇಳೆ ಮಾತನಾಡಿಯ ರಾಮಕೃಷ್ಣಪ್ಪ ಟಿ, ನೀಟ್ ಮತ್ತು ಜೆಇಇ ಪರೀಕ್ಷೆಗಳಿಗೆ ವಿಶೇಷ ತರಬೇತಿ ನೀಡಿದ ಎಲ್ಲಾ ಉಪನ್ಯಾಸಕರು ಹಾಗೂ ಬೋಧಕ ತಂಡದ ಪರಿಶ್ರಮವನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕು. ವಿದ್ಯಾರ್ಥಿಗಳ ಸಾಧನೆಗೆ ಸಹಕರಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು ಎಂದರು.

ಸುಮಾರು ಹತ್ತು ವರ್ಷಗಳ ಕನಸು ಇಂದು ನನಸಾಗಿದೆ. ನಮ್ಮ ವಿದ್ಯಾರ್ಥಿ ಎಐಐಎಂಎಸ್ ನಾಗಪುರದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಪ್ರವೇಶಾತಿ ಪಡೆದಿರುವುದು ಸಂಸ್ಥೆಗೆ ಹೆಮ್ಮೆಯ ಸಂಗತಿ. ವಿದ್ಯಾರ್ಥಿಗಳ ಸಾಧನೆಯ ಹಿಂದೆ ಉಪನ್ಯಾಸಕರು ಹಾಗೂ ಬೋಧಕ ತಂಡದ ನಿರಂತರ ಪರಿಶ್ರಮವಿದೆ. ಪ್ರತಿ ವಿಭಾಗದಲ್ಲಿಯೂ ಎಂಟು ಮಂದಿ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದು, ಪ್ರತಿವರ್ಷ ಜೆಇಇ ಮತ್ತು ನೀಟ್ ಪರೀಕ್ಷೆಗಳಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಸುಮಾರು 1,500 ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆಯ ಮೂಲಕ ಅನುಕೂಲವಾಗಿದ್ದು, 15 ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.

ಪ್ರಾಂಶುಪಾಲರಾದ ಗೌರಿಶಂಕರ್ ಮಾತನಾಡಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಇಂದು ಪ್ರತಿಫಲ ದೊರೆತಿದೆ. ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಂಸ್ಥೆಯ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿಯೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ಅಗತ್ಯ ಮಾರ್ಗದರ್ಶನ ನೀಡಲು ಸಂಸ್ಥೆ ಮುತುವರ್ಜಿ ವಹಿಸಲಿದೆ ಎಂದರು.

ಈ ವೇಳೆ ಹೊಯ್ಸಳ ಪ್ರಥಮಾದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲ್, ಉಪಪ್ರಾಂಶುಪಾಲ ಚಿದಾನಂದ್ ಗೌಡ, ವಿವಿಧ ವಿಭಾಗಗಳ ಮುಖ್ಯಸ್ಥರಾದ ಪೂರ್ಣಿಮಾ, ಮಹದೇವಪ್ಪ ಗೌಡ, ಹರೀಶ್, ಐಶ್ವರ್ಯ ಶೆಟ್ಟಿ, ಹರ್ಷಿತಾ, ಸುಜಾತ, ಕರುಣಾಕರ ನಾಯ್ಡು, ಶಶಿಧರ್, ಶ್ರೀಧರ್ ಪಿ.ಜೆ. ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *