ತಾಂಡವಪುರ: ಮೈಸೂರಿನ ಜೆಎಸ್‌ಎಸ್ ಕಾಲೇಜಿನಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ವಿಶ್ವ ಸಂಸ್ಕೃತಿಯ ಮಹಾಯಾನ ಗದ್ಯ ಮಹಾಕಾವ್ಯ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುತ್ತೂರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಜಿಯವರು.


ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ರವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರು ಆದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿದರು.‌
ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, , ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಸ್ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವರಾದ ತನ್ವೀರ್ ಸೇಠ್ ದರ್ಶನ್ ಧ್ರುವ ನಾರಾಯಣ್ ಎಚ್ ಎಂ ಗಣೇಶ್ ಪ್ರಸಾದ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ : ಸಿಎಂ ರಾಜಕೀಯ ಕಾರ್ಯದರ್ಶಿ ಶ್ರೀ ಎ.ಎಸ್.‌ ಪೊನ್ನಣ್ಣ ಸಮಾರಂಭದಲ್ಲಿ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವ ಡಾಕ್ಟರ್ ಎಸ್ ಯತೀಂದ್ರ ಸಿದ್ರಾಮಯ್ಯನವರು ಮಾತನಾಡಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾದ ಡಾ. ಎಂ. ವೀರಪ್ಪ ಮೊಯ್ಲಿ ಅವರು ಜಾಗತಿಕ ಸಂಸ್ಕೃತಿಯ ಬಗ್ಗೆ ಬರೆದಿರುವ ‘ವಿಶ್ವಸಂಸ್ಕೃತಿಯ ಮಹಾಯಾನ’ ಎಂಬ ಹೆಸರಿನ ಗದ್ಯ ಮಹಾಕಾವ್ಯದ 4ನೇ ಸಂಪುಟದ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದೆ. ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಯವರ ಸಾನಿಧ್ಯ ಮತ್ತು ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ಮತ್ತು ನಿಕಟಪೂರ್ವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರ ಉಪಸ್ಥಿತಿ ಕಾರ್ಯಕ್ರಮಕ್ಕೆ ಮೆರುಗು ತಂದಿತ್ತು. ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.


ಡಾ. ಎಂ. ವೀರಪ್ಪ ಮೊಯ್ಲಿ ಅವರದು ವಿಶಿಷ್ಟ ವ್ಯಕ್ತಿತ್ವ. ಶಾಸಕಾಂಗ ಮತ್ತು ನ್ಯಾಯಾಂಗದಲ್ಲಿ ಮಾತ್ರವಲ್ಲ, ಸಾಹಿತ್ಯ ಕ್ಷೇತ್ರದಲ್ಲೂ ಗಣನೀಯ ಸಾಧನೆ ಮಾಡಿದ್ದಾರೆ. ಅವರು ಜಾತಿಬಲ, ತೋಳ್ಬಲ, ಹಣಬಲಗಳು ಇಲ್ಲದಿದ್ದರೂ ರಾಜ್ಯದ ಮುಖ್ಯಮಂತ್ರಿಯಾದರು. ಕಾನೂನು ವ್ಯಾಸಂಗ ಮಾಡಿ ಕಾರ್ಕಳದಲ್ಲಿ ವಕೀಲಿಕೆ ಮಾಡುತ್ತಿದ್ದ ಅವರು ಮುಂದೆ ಕೇಂದ್ರದ ಕಾನೂನು ಮಂತ್ರಿಯಾದರು. ಸಿಇಟಿಯನ್ನು ಪರಿಚಯಿಸಿ ಬಡವರ ಮಕ್ಕಳಿಗೂ ಇಂಜಿನಿಯರಿಂಗ ಮತ್ತು ವೈದ್ಯಕೀಯ ಸೀಟು ಸಿಗುವಂತೆ ಮಾಡಿದರು. ಎಂದು ಹೇಳಿದರು.


ಕರ್ನಾಟಕದ ಮತ್ತು ಭಾರತದ ಇತಿಹಾಸ, ಜನ ಜೀವನ ಮತ್ತು ಸಂಸ್ಕೃತಿಗೆ ಬರೆದಿರುವ ವೀರಪ್ಪ ಮೊಯ್ಲಿಯವರು ಈಗ ಜಾಗತಿಕ ಸಂಸ್ಕೃತಿಯ ಬಗ್ಗೆ ಗದ್ಯಮಹಾಕಾವ್ಯ ಬರೆದಿರುವುದು ಕನ್ನಡಿಗರಾದ ನಾವೆಲ್ಲರೂ ಹೆಮ್ಮೆ ಪಡಬೇಕಾದ ವಿಷಯ. ರಾಜಕಾರಣದಲ್ಲಿ ಎಷ್ಟೇ ಬ್ಯುಸಿಯಾಗಿದ್ದರೂ ಅವರು ಎಂದೂ ಓದು ಮತ್ತು ಬರಹವನ್ನು ನಿಲ್ಲಿಸಿಲ್ಲ. ಸಾಹಿತ್ಯ ಪ್ರಕಾರಗಳಾದ ಕಾದಂಬರಿಗಳು, ನಾಟಕಗಳು, ಕವನ ಸಂಕಲನಗಳ ಜೊತೆಗೆ 2 ಮಹಾಕಾವ್ಯವನ್ನು ಬರೆದಿದ್ದಾರೆ, ಎಂದು ಸಚಿವರು ತಿಳಿಸಿದರು.

Spread the love

Leave a Reply

Your email address will not be published. Required fields are marked *