ಕೃಷ್ಣರಾಜಪೇಟೆ: ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ಶ್ರೀ ಡಾ. ನಂಜುಂಡಸ್ವಾಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಸಮಾಜ ಸೇವಕರು ಹಾಗೂ ಉದ್ಯಮಿಗಳಾದ ಡಾ. ನಂಜುಂಡಸ್ವಾಮಿ ಮತ್ತು ಅವರ ಧರ್ಮಪತ್ನಿ ಗೀತಾ ನಂಜುಂಡಸ್ವಾಮಿ ಅವರು ಗ್ರಾಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮದಿಂದ ಅದ್ದೂರಿಯಾಗಿ ಸ್ವಾಗತ ಕೋರಿದರು.
ನಂತರ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವವನ್ನು ಏಕೆ ಆಚರಿಸಬೇಕು, ಅದರ ಮಹತ್ವ, ಉದ್ದೇಶ ಹಾಗೂ ಕನ್ನಡ ಭಾಷೆ, ನಾಡು-ನುಡಿಯ ಸಂರಕ್ಷಣೆಯಲ್ಲಿ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ ಏನು ಎಂಬುದರ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಂಗವಾಗಿ ಡಾ. ನಂಜುಂಡಸ್ವಾಮಿ, ಗೀತಾ ನಂಜುಂಡಸ್ವಾಮಿ, ನಮೃತ, ದರ್ಶನ್, ನಿತ್ಯ ಹಾಗೂ ನಿಖಿತ ಅವರ ಸಹಕಾರದೊಂದಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ಬುಕ್ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ನಂತರ ಅನ್ನಸಂತರ್ಪಣೆಗೆ ಚಾಲನೆ ನೀಡಿ, ಸಿಹಿ ಹಂಚುವ ಮೂಲಕ ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹಂಚಿಕೊಳ್ಳಲಾಯಿತು.
ಇದೇ ಸಂದರ್ಭದಲ್ಲಿ ಸಾಧನ ಮೇಲೋಡಿ ಆರ್ಕೆಸ್ಟ್ರಾ ವತಿಯಿಂದ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಂಗೀತ ಕಾರ್ಯಕ್ರಮವು ನೆರೆದಿದ್ದ ಸಾರ್ವಜನಿಕರ ಮನರಂಜಿಸಿತು.

ಸಮಾಜ ಸೇವಕರು ಹಾಗೂ ಉದ್ಯಮಿಗಳಾದ ಡಾ. ನಂಜುಂಡಸ್ವಾಮಿ ಮತ್ತು ಅವರ ಧರ್ಮಪತ್ನಿ ಗೀತಾ ನಂಜುಂಡಸ್ವಾಮಿ ಅವರನ್ನು ಗ್ರಾಮಸ್ಥರು, ಯುವಕರು ಹಾಗೂ ಅಭಿಮಾನಿಗಳು ಹೂವಿನ ಸುರಿಮಳೆಗೈದು, ಶಾಲು ಹೊದಿಸಿ, ಪೇಟ ತೊಡಿಸಿ, ಬೃಹತ್ ಗಾತ್ರದ ಹೂವಿನ ಹಾರಗಳನ್ನು ಹಾಕಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕ ಹೆಚ್.ಟಿ. ಮಂಜು, ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ನಾಗೇಂದ್ರ ಕುಮಾರ್, ಸಮಾಜ ಸೇವಕ ಆರ್.ಟಿ.ಒ. ಮಲ್ಲಿಕಾರ್ಜುನ್, ಕಾಂಗ್ರೆಸ್ ಪಕ್ಷದ ಮಂಡ್ಯ ಜಿಲ್ಲಾಧ್ಯಕ್ಷ ಕುಮಾರ್ ಕೊಪ್ಪ ಹಾಗೂ ಅಪ್ಪು ಯುವ ಸಮಾಜ ಸೇವಾ ಟ್ರಸ್ಟ್ ಮತ್ತು ಜಯಕರ್ನಾಟಕ ಸಂಘಟನೆಯ ಯುವ ಘಟಕದ ಅಧ್ಯಕ್ಷ ಕಾಮನಹಳ್ಳಿ ಮಹೇಶ್ ಅವರನ್ನು ಸಹ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಮಾಜ ಸೇವಕರು ಹಾಗೂ ಉದ್ಯಮಿಗಳಾದ ಡಾ. ನಂಜುಂಡಸ್ವಾಮಿ, ಗೀತಾ ನಂಜುಂಡಸ್ವಾಮಿ, ನಿಖಿತ, ನಿತ್ಯ, ನಮೃತ, ದರ್ಶನ್, ಡಾ. ನಂಜುಂಡಸ್ವಾಮಿ ಅವರ ಆಪ್ತ ಸಹಾಯಕ ಸುಕುಮಾರಸ್ವಾಮಿ, ಹೆಚ್.ಬಿ. ಹರೀಶ್, ಪ್ರಕಾಶ್, ಕಿಟ್ಟಿ, ನಂಜಪ್ಪ, ನಂಜುಂಡಿ, ಸುಮನ್, ನಂದೀಶ್ (ತಂಬಿ), ಅರ್ಜುನ್, ಬಂಕ್ ಸೀನ, ಉಮೇಶ್, ಮಹದೇವ, ಪುನಿ, ಯಶ್ವಂತ್, ಅರವಿಂದ್, ಶಿವು, ಸೂರಿ, ಶಿವಕುಮಾರ್, ಅಭಿ ಸೇರಿದಂತೆ ಹೊಸಹೊಳಲು ಗ್ರಾಮದ ಗ್ರಾಮಸ್ಥರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ನಾಡು, ನುಡಿ, ಭಾಷೆಯ ಮೇಲಿನ ಅಭಿಮಾನವನ್ನು ಬಿಂಬಿಸುವುದರ ಜೊತೆಗೆ ಶಾಲಾ ಮಕ್ಕಳಿಗೆ ಶೈಕ್ಷಣಿಕ ನೆರವು ನೀಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ್ದು ವಿಶೇಷವಾಗಿತ್ತು.
