Gadag | ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ಆರೋಪ

Gadag | ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ಆರೋಪ


ಗದಗ: ತಂದೆಯೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಗದಗ (Gadag) ಜಿಲ್ಲೆಯಲ್ಲಿ ನಡೆದಿದೆ.

16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸುಮಾರು 55 ವರ್ಷದ ತಂದೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಘಟನೆ ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ತಂದೆ ರಮೇಶ್ ಮೇಲೆ ಈಗ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿ ಗರ್ಭಿಣಿ ಆಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಒಂದು ವರ್ಷದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರ ನಡೆಸುತ್ತಿದ್ದ. ಅತ್ಯಾಚಾರದ ನಂತರ ಯಾರಿಗೂ ಹೇಳದಂತೆ ಬೆದರಿಕೆ ಹಾಕುತ್ತಿದ್ದ. ಅಕಸ್ಮಾತ್ ಯಾರ ಮುಂದಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂಬ ಆರೋಪ ಸಂತ್ರಸ್ತೆ ಬಾಲಕಿಯದ್ದಾಗಿದೆ.

ಸದ್ಯ ಆರೋಪಿ ತಂದೆ ರಮೇಶ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಡಿಎನ್‌ಎ ಪರೀಕ್ಷೆ ಒಳಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆ. ಈ ಕುರಿತು ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

Spread the love

Leave a Reply

Your email address will not be published. Required fields are marked *