ನೆಲಮಂಗಲ: ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕು ಸೋಲೂರು ಹೋಬಳಿ ಮೋಟಗಾನಹಳ್ಳಿ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಮಹಿಳಾ ಸಭೆ ಮತ್ತು ವಿಶ್ವ ಮಹಿಳಾ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಮೇಶ್ ನಾಯಕ್ ಅವರು ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಮ್ಯೂಸಿಕಲ್ ಚೇರ್, ಲೆಮನ್ ಅಂಡ್ ಸ್ಫೂನ್, ಬಕಿಟ್ ಯಿಂದ ಬಾಲ್, ಮಡಿಕೆ ಹೊಡೆಯೋ ಆಟ, ಇನ್ನಿತರ ಆಟಗಳನ್ನು ಆಯೋಜನೆ ಮಾಡಿ ಆಟದಲ್ಲಿ ಭಾಗವಹಿಸಿ ಗೆದ್ದ ಮಹಿಳೆಯರಿಗೆ ಬಹುಮಾನ ನೀಡಿ ಗೌರವಿಸಿದರು.
ಮಹಿಳೆಯರಿಗೆ ಶ್ರೀ ಶಕ್ತಿ ಸಂಘದಿಂದ ಚೆಕ್ ವಿತರಿಸಿದರು.
ವಿಶೇಷವಾಗಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹಿಳೆಯರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅಧ್ಯಕ್ಷ ಎಂ ಆರ್ ಶಿವಕುಮಾರ್ ಮಹಿಳೆಯು ಸಮಾಜದ ಸ್ವಾಭಿಮಾನದ ಸಂಕೇತವಾಗಿದ್ದು, ಪ್ರತಿ ಕ್ಷೇತ್ರದಲ್ಲಿ ಮಹಿಳೆಯು ಗುರುತಿಸಿಕೊಂಡು ಸಮಾಜದ ಪ್ರಗತಿಯ ಪ್ರಮುಖ ಭಾಗವಾಗಿದ್ದಾಳೆ’ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಮತ್ತು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಲು ಮತ್ತು ಮಹಿಳೆಯರ ಸುರಕ್ಷತೆಗಾಗಿ ಕಾನೂನುಗಳು ಬಿಗಿಯಾಗಬೇಕು ಎಂದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಮೇಶ್ ನಾಯಕ್ ಮಾತನಾಡಿ ನಮ್ಮ ಪಂಚಾಯಿತಿಯಲ್ಲಿ ಮಹಿಳಾ ಸಭೆ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಮ್ಮಿಕೊಂಡಿದ್ದು ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಮಹಿಳೆಯರಿಗೆ ಸನ್ಮಾನಿಸಿ ಗೌರವಿಸಿದ್ದೇವೆ ನಮ್ಮ ಪಂಚಾಯಿತಿಯಲ್ಲಿ 17 ಸದಸ್ಯರು ಇದ್ದು ಅದರಲ್ಲಿ 11 ಸದಸ್ಯರು ಮಹಿಳೆಯರಾಗಿದ್ದು ವಿಶೇಷವಾಗಿದೆ ಮಹಿಳೆಯರು ಉನ್ನತ ಶಿಕ್ಷಣ ಪಡೆದು ಕುಟುಂಬದ ನಿರ್ವಹಣೆಯ ಜೊತೆಗೆ ಸಮಾಜದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವುದು ಆಶಾದಾಯಕ ಬೆಳವಣಿಗೆ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಮಹಿಳೆಯರು ಮುಂದಾಗಬೇಕು ಎಂದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಎಂ ಆರ್ ಶಿವಕುಮಾರ್, ಉಪಾಧ್ಯಕ್ಷರಾದ ವಂದನ ಮಹೇಶ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಮೇಶ್ ನಾಯಕ್, ಪಂಚಾಯತಿ ಸೆಕ್ರೆಟರಿ ವೇಣುಗೋಪಾಲ್,ಡಾ. ಹೇಮಲತಾ ಗುಡೇಮಾರನಹಳ್ಳಿ PHC ವೈದ್ಯರು, ಡಾ. ಗೀತಾ ಮೋಟಗಾನಹಳ್ಳಿ PHC, ಡಾ. ಕಣ್ಮಣಿ ಆಯುಷ್ ಕೇಂದ್ರ ಮೋಟಗಾನಹಳ್ಳಿ, ವಿಜಯಲಕ್ಷ್ಮಿ ACDPO ಮಾಗಡಿ, ಮೀನNRLM ಮಾಗಡಿ ತಾಲೂಕು ಪಂಚಾಯಿತಿ, ಶ್ರೀಮತಿ ಶಾರದ ಶಿಕ್ಷಣ ಇಲಾಖೆ CRP ಮೋಟಗಾನಹಳ್ಳಿ, ಗ್ರಾಮ ಪಂಚಾಯತಿ ಎಲ್ಲ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು,
ಮಹಿಳೆಯರು,ಸ್ತ್ರೀಶಕ್ತಿ ಸಂಘದ ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಪಾಲ್ಗೊಂಡಿದ್ದರು