ಬುಲೆರೊ ಹಾಗೂ ಸಾರಿಗೆ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು Fatal accident between Bulero and transport bus, four killed on the spot

ಬುಲೆರೊ ಹಾಗೂ ಸಾರಿಗೆ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು  Fatal accident between Bulero and transport bus, four killed on the spot

ಯಾದಗಿರಿ, ಏಪ್ರಿಲ್​ 11:ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಬುಲೆರೊ ಮತ್ತು ಬಸ್ ನಡುವಿನ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬುಲೆರೊ ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ನಿನ್ನೆ ರಾತ್ರಿ‌ ನಡೆದಿದೆ. ಯಾದಗಿರಿ ತಾಲೂಕಿನ ವರ್ಕನಹಳ್ಳಿ ಗ್ರಾಮದವರಾದ ಬುಲೆರೊ ಚಾಲಕ ಶರಣಪ್ಪ(30), ಸುನೀತಾ(19), ಸೋಮವ್ವ(50) ಮತ್ತು ತಂಗಮ್ಮ(55) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಎಸ್​​ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ಜವಳ ಕಾರ್ಯಕ್ಕೆ ಕುಟುಂಬಸ್ಥರು ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಬುಲೆರೋ ವಾಹನದಲ್ಲಿದ್ದ ಇನ್ನು ಹಲವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Spread the love

Leave a Reply

Your email address will not be published. Required fields are marked *