ನೇಣು ಬಿಗಿದುಕೊಂಡು ಡೆಂಟಲ್‌ ವಿದ್ಯಾರ್ಥಿನಿ ಆತ್ಮಹತ್ಯೆ Dental student commits suicide by hanging herself

ನೇಣು ಬಿಗಿದುಕೊಂಡು ಡೆಂಟಲ್‌ ವಿದ್ಯಾರ್ಥಿನಿ ಆತ್ಮಹತ್ಯೆ Dental student commits suicide by hanging herself

ಬೆಂಗಳೂರು: ನೇಣು ಬಿಗಿದುಕೊಂಡು ಡೆಂಟಲ್‌ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸೌಮ್ಯ ಗಣೇಶ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ರಾಜಾಜಿನಗರ ಖಾಸಗಿ ಕಾಲೇಜಿನಲ್ಲಿ ದ್ವೀತಿಯ ವರ್ಷದ ಡೆಂಟಲ್ ಓದುತ್ತಿದ್ದಳು. ಸಂಜೆ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಶರಣಾಗಿದ್ದಾಳೆ.

ಪರೀಕ್ಷೆ ಸಮಯದಲ್ಲಿ ಆತಂಕಗೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಕಳೆದ 15 ದಿನಗಳ ಹಿಂದೆ ಯುವತಿಗೆ ಪೋಷಕರು ಕೌನ್ಸೆಲಿಂಗ್ ಮಾಡಿಸಿದ್ದರು. ಇಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.‌

ಘಟನೆ ಸಂಬಂದ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Leave a Reply

Your email address will not be published. Required fields are marked *