ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಹಗರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಅವರನ್ನು ಬಂಧಿಸಿದೆ.
ಬೆಂಗಳೂರು (ಏ.13): ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಹಗರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಅವರನ್ನು ಬಂಧಿಸಿದೆ. ಇತ್ತೀಚೆಗೆ ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ ಬೆನ್ನಲ್ಲೇ ಇದೀಗ ಲೀಲಾವತಿ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದೆ.