ಬೀದರ್: ಹುಬ್ಬಳ್ಳಿಯಲ್ಲಿ (Hubballi) 5 ವರ್ಷದ ಬಾಲಕಿ ಕೊಲೆ ಪ್ರಕರಣ ಮಾಸುವ ಮುನ್ನವೇ ಬೀದರ್‌ನಲ್ಲಿ (Bidar) ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಗೇಟ್ ಬಳಿ ಆಡುತ್ತಿದ್ದ ಬಾಲಕಿಯನ್ನು ಯುವಕನೊಬ್ಬ ಅಪಹರಿಸಲು (Kidnap) ಯತ್ನಿಸಿದ್ದಾನೆ. ಈ ದೃಶ್ಯ ಸಿಟಿಟಿವಿಯಲ್ಲಿ ಲಭ್ಯವಾಗಿದೆ.
ಬೀದರ್‌ನ ವಿದ್ಯಾನಗರ ಬಡಾವಣೆಯ 11ನೇ ಕ್ರಾಸ್‌ನಲ್ಲಿರುವ ಸತೀಶ್ ಬಕ್ಕಾಚೌಡೇಕರ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಂಗಳಲ್ಲಿ ಬಾಲಕಿಯರಿಬ್ಬರು ಆಟವಾಡುತ್ತಿದ್ದರು. ಈ ವೇಳೆ ಯುವಕನೊಬ್ಬ ಮನೆ ಮುಂದೆ ಬೈಕ್ ನಿಲ್ಲಿಸಿ, ಸ್ವಲ್ಪ ಹೊತ್ತು ನೋಡಿಕೊಂಡು ನಿಂತಿದ್ದಾನೆ. ಬಳಿಕ ಗೇಟ್ ಒಳಗೆ ಹೋಗಿ ಅಲ್ಲೇ ಆಟ ಆಡುತ್ತಿದ್ದ ಇಬ್ಬರು ಬಾಲಕಿಯರ ಪೈಕಿ ಒಬ್ಬಳನ್ನ ಅಪಹರಿಸಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಪೋಷಕರು ಹೊರಬರುತ್ತಿದ್ದಂತೆ ಬೈಕ್ ಸಮೇತ ಯುವಕ ಪರಾರಿಯಾಗಿದ್ದಾನೆ.
ಅಪಹರಿಸಲು ಯತ್ನಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಯುವಕನ ಅಸಭ್ಯ ವರ್ತನೆಯ ಬಗ್ಗೆ ಬಾಲಕಿಯರು ಪೋಷಕರಿಗೆ ತಿಳಿಸಿದ್ದಾರೆ.