ಬೆಳಗಾವಿ ನಿಲ್ದಾಣದ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು – ತಪ್ಪಿದ ಭಾರೀ ಅನಾಹುತ Goods train derails near Belgaum station – a major disaster averted

ಬೆಳಗಾವಿ ನಿಲ್ದಾಣದ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು – ತಪ್ಪಿದ ಭಾರೀ ಅನಾಹುತ Goods train derails near Belgaum station – a major disaster averted

ಬೆಳಗಾವಿ: ನಗರದ (Belagavi) ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲು (Goods Train ) ಹಳಿ ತಪ್ಪಿದ ಘಟನೆ ಇಂದು (ಏ.15) ಮುಂಜಾನೆ ನಡೆದಿದೆ.

ಬೆಳಗಾವಿ ರೈಲು ನಿಲ್ದಾಣದಿಂದ ಅರ್ಧ ಕಿಮೀ ದೂರದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿದೆ. ರೈಲು ಬೆಳಗಾವಿ ಕಡೆಯಿಂದ ಹುಬ್ಬಳ್ಳಿ (Hubballi) ಕಡೆಗೆ ಹೊರಟಿತ್ತು. ಈ ವೇಳೆ ಹಳಿ ತಪ್ಪಿ ಮೂರು ಬೋಗಿಗಳು ಪಕ್ಕಕ್ಕೆ ಸರಿದಿವೆ.

20 ನಿಮಿಷ ಆಗಿದ್ದರೆ ಗೂಡ್ಸ್ ರೈಲಿಗೆ ರಾಣಿ ಚನ್ನಮ್ಮ ರೈಲು ಡಿಕ್ಕಿಯಾಗುವ ಸಂಭವವಿತ್ತು ಎನ್ನಲಾಗಿದೆ.‌ ಆದರೆ ಬೆಂಗಳೂರಿನಿಂದ ಬೆಳಗಾವಿಯತ್ತ ಬರುತ್ತಿದ್ದ ರಾಣಿ ಚನ್ನಮ್ಮ ರೈಲನ್ನು 8 ಕಿಮೀ ಹಿಂದಿನ ದೇಸೂರು ನಿಲ್ದಾಣದಲ್ಲಿಯೇ ಅಧಿಕಾರಿಗಳು ತಡೆದಿದ್ದಾರೆ. ಇದರಿಂದ ಆಗುತ್ತಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.

ಸ್ಥಳಕ್ಕೆ ರೇಲ್ವೇ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಯಾವ ಕಾರಣಕ್ಕೆ ಹಳಿ ತಪ್ಪಿದೆ ಎಂಬ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

Spread the love

Leave a Reply

Your email address will not be published. Required fields are marked *