ಇನ್ನೋವಾ ಡಿಕ್ಕಿಯಾಗಿ 10 ಅಡಿ ದೂರ ಹಾರಿ ಬಿದ್ದ ಮಹಿಳೆ – ಮಕ್ಕಳಿಗೆ ಚಾಕ್ಲೇಟ್ ತರಲು ಹೋಗಿ ಅಪಘಾತಕ್ಕೆ ಬಲಿ Woman falls 10 feet after being hit by Innova – died in accident while trying to bring chocolates to her children

ಹಾಸನ: ಮಕ್ಕಳು ಅಳುತ್ತಿದ್ದಾರೆ ಎಂದು ಚಾಕ್ಲೇಟ್ ತರಲು ಅಂಗಡಿಗೆ ತೆರಳುತ್ತಿದ್ದ ಮಹಿಳೆಗೆ ಕಾರು ಡಿಕ್ಕಿಯಾಗಿ (Accident) ಸಾವನ್ನಪ್ಪಿದ ಧಾರುಣ ಘಟನೆ ಸಕಲೇಶಪುರದ (Sakleshpura) ಬಾಳ್ಳುಪೇಟೆಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಹಲಸುಲಿಗೆ ಗ್ರಾಮದ ಗುಲಾಬಿ ಎಂದು ಗುರುತಿಸಲಾಗಿದೆ. ಮಹಿಳೆ ಡಿವೈಡರ್ ದಾಟಿ ರಸ್ತೆಗಿಳಿಯುತ್ತಿದ್ದಂತೆ ಇನ್ನೋವಾ ಕಾರು ಡಿಕ್ಕಿಯಾಗಿದೆ. ಪರಿಣಾಮ ಮಹಿಳೆ ಸುಮಾರು 10 ಅಡಿ ದೂರ ಹಾರಿ ಬಿದ್ದು ಮೃತಪಟ್ಟಿದ್ದಾಳೆ

ಮಹಿಳೆಗೆ ಡಿಕ್ಕಿ ಹೊಡೆದ ಬಳಿಕ ಕಾರು ಚಾಲಕ ಕಾರನ್ನು ನಿಲ್ಲಿಸದೆ ಅಮಾನವೀಯ ವರ್ತನೆ ತೋರಿದ್ದಾನೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿನ ನಂಬರ್ ಸಹ (ಕೆಎ-05-ಎಎಚ್-0576) ಪತ್ತೆಯಾಗಿದೆ.

ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Spread the love

Leave a Reply

Your email address will not be published. Required fields are marked *