ಕೌಟುಂಬಿಕ ಕಲಹದಿಂದ ಬೇಸತ್ತು ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಡುಹೊಲ ಗ್ರಾಮದಲ್ಲಿ ನಡೆದಿದೆ. ಸದ್ಯ ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ವಿದ್ಯುತ್ ತಂತಿ ತುಳಿದು ರೈತರಿಬ್ಬರು ಸಾವನ್ನಪ್ಪಿದ್ದಾರೆ.
ಚಾಮರಾಜನಗರ, ಏಪ್ರಿಲ್ 14: ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಮಕ್ಕಳ ಜೊತೆ ತಾಯಿ (Mother) ಬಾವಿಗೆ ಹಾರಿ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟ ಬಳಿಯ ಕಾಡುಹೊಲ ಗ್ರಾಮದಲ್ಲಿ ನಡೆದಿದೆ. ಸುಶೀಲಾ(30), ಪುತ್ರಿ ದಿವ್ಯಾ(11), ಪುತ್ರ ಚಂದ್ರು(8) ಮೃತರು. ಮೊದಲು ಮಕ್ಕಳನ್ನ ಬಾವಿಗೆ ತಳ್ಳಿ ಬಳಿಕ ಸುಶೀಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನ ಮಾಲೀಕ ಬಾವಿಗೆ ನೀರು ತರಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.