ಮಹಿಳೆಯ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ, ಪ್ರಶ್ನಿಸಿದವರ ಮೇಲೆ ಹಲ್ಲೆ ಮಾಡಿ ಕಾಮುಕ ಪರಾರಿ Man unbuttons pants in front of woman, behaves indecently, attacks those who question him, and flees

ಮಹಿಳೆಯ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ, ಪ್ರಶ್ನಿಸಿದವರ ಮೇಲೆ ಹಲ್ಲೆ ಮಾಡಿ ಕಾಮುಕ ಪರಾರಿ Man unbuttons pants in front of woman, behaves indecently, attacks those who question him, and flees

ಬೆಂಗಳೂರು : ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಕಾಮುಕನೊಬ್ಬ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿ, ಪತಿ ಮತ್ತು ಸ್ಥಳೀಯರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಆರೋಪಿ ಕಾರ್ತಿಕ್ ಪರಾರಿಯಾಗಿದ್ದು, ಪೊಲೀಸರು ಆತನನ್ನು ಹುಡುಕುತ್ತಿದ್ದಾರೆ. ಈ ಘಟನೆಯಿಂದ ನಗರದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಆತಂಕ ಹೆಚ್ಚಿದೆ.

ಬೆಂಗಳೂರು, ಏಪ್ರಿಲ್ 16: ಬೆಂಗಳೂರಿನ (Bengaluru) ಕ್ವೀನ್ಸ್ ರಸ್ತೆಯ (Queens Road) ರಾಜೀವ್ ಗಾಂಧಿ ಕಾಲೋನಿಯಲ್ಲಿ ಕಾಮುಕನೊಬ್ಬ ಮಹಿಳೆಯೊಬ್ಬರನ್ನು ಕಂಡಾಗ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದಿದ್ದಲ್ಲದೆ, ಆಕೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾನೆ. ಇದನ್ನು ಪ್ರಶ್ನಿಸಿದ ಮಹಿಳೆಯ ಪತಿ ಹಾಗೂ ಸ್ಥಳೀಯರ ಮೇಲೆ ಬೇಕಾಬಿಟ್ಟಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.  ಘಟನೆಯಲ್ಲಿ ಒಟ್ಟಾರೆ 7 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಏಪ್ರಿಲ್ 13 ರಂದು ರಾತ್ರಿ 10.30 ಕ್ಕೆ ದುಷ್ಕೃತ್ಯ ನಡೆದಿದೆ. ಮಹಿಳೆಯೊಬ್ಬರು ಊಟ ಮುಗಿಸಿ ಎರಡನೇ ಮಹಡಿಗೆ ಮಲಗಲು ತೆರಳುತ್ತಿದ್ದಾಗ ಎದುರು ಮನೆಯ ಕಾರ್ತಿಕ್ ಎಂಬಾತ ಎದುರು ಬಂದಿದ್ದಾನೆ. ಪ್ಯಾಂಟ್ ಬಿಚ್ಚಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದಲ್ಲದೆ, ಮಹಿಳೆಯನ್ನು ಲೈಂಗಿಕ ಕ್ರಿಯೆಗೆ ಬರುವಂತೆ ಕರೆದಿದ್ದಾನೆ. ಕೂಡಲೇ ಮಹಿಳೆ ಆಕೆಯ ಪತಿಯನ್ನು ಕರೆದಿದ್ದಾರೆ. ಅಷ್ಟರಲ್ಲಿ ರೊಚ್ಚಿಗೆದ್ದ ಕಾಮುಕ ಹಲ್ಲೆ ನಡೆಸಿದ್ದಾನೆ.

ಗಲಾಟೆ ಜೋರಾಗುತ್ತಿದ್ದಂತೆಯೇ ಸುತ್ತಲಿನ ಜನ ಆಗಮಿಸಿದ್ದಾರೆ. ಜಗಳ ಬಿಡಿಸಲು ಬಂದವರ ಮೇಲೆ ಕೈಗೆ ಸಿಕ್ಕ ವಸ್ತುಗಳನ್ನೆಲ್ಲಾ ಬಳಸಿ ಕಾಮುಕ ಹಲ್ಲೆ ಮಾಡಿದ್ದಾನೆ. ಹಾಲೋಬ್ಲಾಕ್, ಹೂವಿನ ಪಾಟ್, ಕಿಟಕಿ ಗ್ಲಾಸ್​​ನಿಂದ ಹೊಡೆದು ಅಟ್ಟಹಾಸ ಮೆರೆದಿದ್ದಾನೆ. ತಡೆಯಲು ಬಂದ ತಾಯಿಯ ಮೇಲೂ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಮುಕ ಕಾರ್ತಿಕ್ ತಾಯಿಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಆರೋಪಿಯು ಈ ಹಿಂದೆ ಕೂಡ ಹಲವು ಮಹಿಳೆಯರ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.

ಬೆಂಗಳೂರಿನ ಸದ್ದುಗುಂಟೆಪಾಳ್ಯದಲ್ಲಿ ವ್ಯಕ್ತಿಯೊಬ್ಬ ಯುವತಿಗೆ ಕಿರುಕುಳ ನೀಡಿ ಪರಾರಿಯಾದ ಘಟನೆಯ ನೆನಪು ಮಾಸುವ ಮುನ್ನವೇ ಕ್ವೀನ್ಸ್ ರಸ್ತೆಯ ಪ್ರಕರಣ ಬೆಳಕಿಗೆ ಬಂದಿದೆ. ಇದರೊಂದಿಗೆ, ಬೆಂಗಳೂರಿನಲ್ಲಿ ಮಹಿಳೆಯರ ವಿರುದ್ಧದ ವಿಕೃತಿ ಹೆಚ್ಚಾಗುತ್ತಿರುವ ಬಗ್ಗೆ ಆತಂಕವೂ ವ್ಯಕ್ತವಾಗಿದೆ. ಸದ್ದುಗುಂಟೆಪಾಳ್ಯ ಪ್ರಕರಣದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವುದು ಪೊಲೀಸರಿಗೆ ಬಹುದೊಡ್ಡ ಸವಾಲಾಗಿ ಪರಿಣಮಿಸಿತ್ತು. ಇದೀಗ ಕಾಮುಕ ಕಾರ್ತಿಕ್‌ನನ್ನು ಪತ್ತೆ ಮಾಡಿ ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

Spread the love

Leave a Reply

Your email address will not be published. Required fields are marked *