ನೆಲಮಂಗಲ:ಅರೆಬೆಂದ ಸ್ಥಿತಿಯಲ್ಲಿ ಶವ ಪತ್ತೆ

ನೆಲಮಂಗಲ:ಅರೆಬೆಂದ ಸ್ಥಿತಿಯಲ್ಲಿ ಶವ ಪತ್ತೆ

ನೆಲಮಂಗಲ: ನಿರ್ಜನ ಪ್ರದೇಶದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಭೀಕರ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಂಡಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಸುಮಾರು 30 ವರ್ಷದಿನವನಾಗಿರಬಹುದೆಂದು ಪ್ರಾಥಮಿಕವಾಗಿ ಪೊಲೀಸರು ಅಂದಾಜಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಮನಗಂಡ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಘಟನೆ ಕುರಿತು FIR ದಾಖಲಿಸಿದ್ದಾರೆ.

ರಾಜಗೋಪಾಲನಗರ–ಬ್ಯಾಡರಹಳ್ಳಿ ಪೊಲೀಸ್ ಠಾಣೆಗಳ ಸಮೀಪದ ನೈಸ್ ರಸ್ತೆ ಪಕ್ಕದಲ್ಲೇ ಒಂದು ನಿರ್ಜನ ಪ್ರದೇಶವಿದ್ದು, ಇದೇ ಭಾಗದಲ್ಲಿ ಶವ ಪತ್ತೆಯಾಗಿದೆ. ಪೆಟ್ರೋಲ್ ಸುರಿದು ಸುಟ್ಟಿರುವ ಅನುಮಾನ ಇರುವುದರಿಂದ ಮೃತದೇಹ ಅರೆಬೆಂದ ಸ್ಥಿತಿಯಲ್ಲಿ ಸಿಕ್ಕಿದೆ. ಬೇರೆಡೆ ಹತ್ಯೆಗೈದ ನಂತರ ಶವವನ್ನು ಇಲ್ಲಿ ತಂದು ಸುಟ್ಟಿರುವ ಶಂಕೆ ಪೊಲೀಸರಿಗೆ ವ್ಯಕ್ತವಾಗಿದೆ. ಮೃತದೇಹದ ಮೇಲೆ ಹಗ್ಗದಿಂದ ಕಟ್ಟಿದ ಗುರುತುಗಳು ಕಾಣಿಸಿಕೊಂಡಿದ್ದು, ಇದು ಘಟನೆ ಹತ್ಯೆಯೇ ಆಗಿರಬಹುದು ಎಂಬ ಕೋಣೆಯನ್ನು ಬಲಪಡಿಸಿದೆ.

ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿ.ಕೆ. ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. SOCO ತಂಡ ಕೂಡ ಸ್ಥಳಕ್ಕೆ ಆಗಮಿಸಿ ತಾಂತ್ರಿಕ ಪರಿಶೀಲನೆ, ಸಾಕ್ಷ್ಯ ಸಂಗ್ರಹಣೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಗುರುತು ಪತ್ತೆ ಹಾಗೂ ಶವ ಸುಟ್ಟ ವ್ಯಕ್ತಿಯ ಹತ್ಯೆ ಸಂಬಂಧ ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.
Spread the love

Leave a Reply

Your email address will not be published. Required fields are marked *