ಆಲದ ಮರ ಬಿದ್ದು ಮಹಿಳೆ ಸಾ**ವು

ಯಳಂದೂರು: ತಾಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ಆಲದ ಮರ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ಗ್ರಾಮದ ಆದಿ ಜಾಂಬವರ ಬೀದಿಯ ನಿವಾಸಿ ಮಹದೇವಮ್ಮ (55) ಎಂಬುವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಗುಂಬಳ್ಳಿ ಗ್ರಾಮದಿಂದ ಯರಗಂಬಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಹಾಲು ಶಿಥಲೀಕರಣ ಕೇಂದ್ರದ ಬಳಿ ಇರುವ ದೇಗುಲದಲ್ಲಿ ಪೂಜೆ ಮುಗಿಸಿ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಮರ ಇದ್ದಕ್ಕಿದ್ದಂತೆ ಬಿದ್ದಿದೆ.

ಇದು ದೊಡ್ಡ ಆಲದ ಮರವಾಗಿದ್ದು ಇದರ ತಳಭಾಗದಲ್ಲಿ ಕಂದಕ ಉಂಟಾಗಿತ್ತು. ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದ ಇದು ನೆಲ್ಕಕೊರಗಿದ್ದು ಇವರು ಮೃತಪಟ್ಟಿದ್ದಾರೆ.

ಸಂಬoಧಪಟ್ಟ ಇಲಾಖೆಯ ಅಧಿಕಾರಿಗಳು ಈ ಮರವನ್ನು ತೆರವುಗೊಳಿಸುತ್ತಿದ್ದರೆ ಈ ದುರ್ಘಟನೆ ನಡೆಯುತ್ತಿರಲಿಲ್ಲ. ಹಾಗಾಗಿ ಸಂಬoಧಪಟ್ಟ ತಹಸೀಲ್ದಾರ್ ಹಾಗೂ ಅರಣ್ಯ ಇಲಾಖೆ ಸಿಬ್ಬಂಧಿ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Spread the love

Leave a Reply

Your email address will not be published. Required fields are marked *