ಸಿದ್ದರಾಮಯ್ಯನವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ನಮ್ಮ ಸಮಾಜಕ್ಕೆ ಹಿಂದುಳಿದ ವರ್ಗ ಸಮಾಜಕ್ಕೆ ನೋವಾಗಿದ್ದರು ಸಿದ್ದರಾಮಯ್ಯನವರು ನುಡಿದಂತ ನಡೆದಿರುವುದರಿಂದ ನಮಗೆ ಎಮ್ಮೆ ಅನಿಸುತ್ತದೆ ಅವರ ಸ್ಥಾನ ತುಂಬಲು ಅವರ ಪುತ್ರ ಡಾಕ್ಟರ್ ಯತೆಂದ್ರ ಸಿದ್ದಮಯ್ಯನವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಜೊತೆಗೆ ಉತ್ತಮ ಸಚಿವ ಸ್ಥಾನವನ್ನು ನೀಡಬೇಕು ಎಂದು ವರುಣ ಕ್ಷೇತ್ರದ ಕುರುಬ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ
ತಾಂಡವಪುರ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ಮೂರು ವರ್ಷಗಳಿಂದ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿ ಬಡವರ ಪರವಾದ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಪ್ರತಿ ಮನೆಮನೆಯಲ್ಲೂ ಮನೆಮದ್ದಾಗಿದ್ದಾರೆ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹೇಳಿದಂತೆ ನಡೆದುಕೊಂಡು ನುಡಿದಂತೆ ನಡೆದ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದರಿಂದ ನಮ್ಮ ಕುರುಬ ಸಮಾಜಕ್ಕೆ ಅಲ್ಲ ಇಡೀ ಹಿಂದುಳಿದ ವರ್ಗದ ಸಮಾಜದವರಿಗೆ ನೋವಾಗಿದ್ದು ಅವರು ನುಡಿದಂತೆ ನಡೆದು ಅವರು ತಮ್ಮ ಸ್ಥಾನವನ್ನು ಬಿಟ್ಟು ಕೊಟ್ಟಿರುವುದರಿಂದ ನಮಗೆ ಎಮ್ಮೆ ಅನಿಸುತ್ತದೆ ಆದರೂ ಅವರು ಸ್ಥಾನವನ್ನು ತುಂಬಲು ಅವರ ಪುತ್ರ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾಕ್ಟರ್ ಯತೀಂದ್ರ ಸಿದ್ರಾಮಯ್ಯನವರಿಗೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡು ಜೊತೆಗೆ ಉನ್ನತ ಸಚಿವ ಸ್ಥಾನವನ್ನು ಸಹ ನೀಡಬೇಕು ನಾವು ಸಿದ್ದರಾಮಯ್ಯನವರನ್ನು ಡಾಕ್ಟರ್ ಯತಿಂದ್ರ ಸಿದ್ರಾಮಯ್ಯನವರಲ್ಲಿ ಕಾಣುತ್ತಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಆಗ್ರಹಿಸಿದ್ದಾರೆ
ಅವರು ಇಂದು ನಂಜನಗೂಡು ತಾಲೂಕು, ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಕೆಂಪಿ ಸಿದ್ದನ ಹುಂಡಿ ಗ್ರಾಮದಲ್ಲಿ ಕುರುಬ ಸಮಾಜದ ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಆದ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ನಂಜಯ್ಯನವರ ನೇತೃತ್ವದಲ್ಲಿ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಂಜಯ್ಯನವರು ಹಾಗೂ ಪಕ್ಷದ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎರಡು ಬಾರಿ ಮುಖ್ಯಮಂತ್ರಿ ಆಗಿ ಉತ್ತಮ ಆಡಳಿತ ನೀಡಿ ರಾಜ್ಯದ ಬಡವರ ಹಾಗೂ ಎಲ್ಲ ವರ್ಗದ ಪರವಾಗಿ ಕೆಲಸ ಮಾಡಿದ್ದಾರೆ ಎಲ್ಲಾ ಬಡವರ ಪರವಾಗಿ ಸರ್ಕಾರದ ಯೋಜನೆಗಳನ್ನು ತಲುಪುವಂತೆ ಮಾಡಿದ್ದಾರೆ ಅವರು ಕಾಂಗ್ರೆಸ್ ಪಕ್ಷದ ವರಿಷ್ಠರ ಸೂಚನೆ ಮೇರೆಗೆ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟು ನುಡಿದಂತೆ ನಡೆದ ರಾಮಯ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ನಮಗೆ ನೋವಿದ್ದರೂ ಸಹ ಅವರ ಕಾರ್ಯವೈಖರಿಯಿಂದ ನಮಗೆ ಹೆಮ್ಮೆ ಅನಿಸುತ್ತದೆ ಎಂದು ಹೇಳಿದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ಥಾನವನ್ನು ತುಂಬಲು ಅವರ ಪುತ್ರ ವಿಧಾನ ಪರಿಷತ್ ಸದಸ್ಯ ವರುಣ ವಿಧಾನಸಭಾ ಕ್ಷೇತ್ರ ಆಶ್ರಯ ಸಮಿತಿ ಅಧ್ಯಕ್ಷರಾದ ಡಾಕ್ಟರ ಯತೀಂದ್ರ ಸಿದ್ರಾಮಯ್ಯನವರನ್ನು ಉಪಮುಖ್ಯಮಂತ್ರಿ ಸ್ಥಾನ ನೀಡಿ ಜೊತೆಗೆ ಉತ್ತಮ ಸಚಿವ ಸ್ಥಾನವನ್ನು ಸಹ ನೀಡಬೇಕು ಎಂದು ಒತ್ತಾಯಿಸಿದ ಮುಖಂಡರು ಸಿದ್ದರಾಮಯ್ಯನವರು ಇನ್ನು ಎರಡು ವರ್ಷ ಮುಖ್ಯಮಂತ್ರಿ ಆಗಿ ಮುಂದುವರಿಸಿದ್ದಾರೆ ಬರುವ 2028ನೇ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬರುತ್ತಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಮುಖಂಡರು ಈಗಲೂ ಕಾಲಮಿಂಚಿಲ್ಲ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯನವರಿಗೆ ಸ್ನಾನಮಾನ ಕೊಟ್ಟು ಗೌರವದಿಂದ ನಡೆಸಿಕೊಂಡರೆ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ನಂಜಯ್ಯ ಪ್ರಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಸಿದ್ದು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯ ರವಿ ರಾಜೇಶ್ ಶಿವಮಾದು ಬೀರಲಿಂಗ ಬೀರಪ್ಪ ರಾಜಪ್ಪ ದಾಕು ಸಿದ್ದು ಸೇರಿದಂತೆ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು
