ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆಯ ದಾರುಣ ಅಂ**

ಬೆಂಗಳೂರು: ಮನೆಯಿಂದ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ದುರ್ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಜ್ಯೋತಿ ಎಂದು ಗುರುತಿಸಲಾಗಿದೆ. ಜ್ಯೋತಿ ಅವರ ಪತಿ ಶರತ್ ಕುಮಾರ್ ಚಾಲಕರಾಗಿ ಕೆಲಸ ಮಾಡುತ್ತಿದ್ದು, ದಂಪತಿ ನಡುವೆ ಕೆಲ ದಿನಗಳಿಂದ ಕುಟುಂಬ ಕಲಹ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಜ್ಯೋತಿ ಅವರಿಗೆ ಪತಿ ವರದಕ್ಷಿಣೆ ಸಂಬಂಧ ಕಿರುಕುಳ ನೀಡುತ್ತಿದ್ದರು ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಕಿರುಕುಳದಿಂದ ಮಾನಸಿಕವಾಗಿ ನೊಂದಿದ್ದ ಜ್ಯೋತಿ ನಾಲ್ಕು ದಿನಗಳ ಹಿಂದೆ ಮನೆಯಿಂದ ಹೊರಟು ಹೋಗಿದ್ದರು ಎನ್ನಲಾಗಿದೆ. ಬಳಿಕ ಅವರು ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡು ಹುಡುಕಾಟ ನಡೆಸಿದ್ದರು. ಆದರೆ ಅವರ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ.

ಇದೀಗ ಕುಂಬಳಗೋಡು ಪ್ರದೇಶದ ಕೆರೆಯೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮಹಿಳೆಯ ಸಾವಿನ ಕುರಿತು ಕುಟುಂಬಸ್ಥರು ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಆರೋಪಿಸಿದ್ದು, ಈ ಸಂಬಂಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಗಣಿಸಿ ಪೊಲೀಸರು ತನಿಖೆ ಮುಂದುವರಿಸಿದ್ದು, ಮರಣದ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ತಿಳಿದುಬರಲಿದೆ.

Spread the love

Leave a Reply

Your email address will not be published. Required fields are marked *