ನೆಲಮಂಗಲ: ಕಾರು ಪಲ್ಟಿಯಾಗಿ ಇಬ್ಬರ ದು*ರ್ಮಣ , ಮೂವರಿಗೆ ಗ*ರ ಗಾಯ

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ದುರ್ಮರಣ, ಮೂವರಿಗೆ ಗಂಭೀರ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ದಿಲೀಪ್ (23) ಹಾಗೂ ನಿತೀಶ್ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಸಂದೀಪ್, ಅರುಣ್ ಹಾಗೂ ಮಂಜುನಾಥ್ ಅವರನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸ್ನೇಹಿತರ ಹುಟ್ಟುಹಬ್ಬದ ಕಾರ್ಯಕ್ರಮ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವುದಾಗಿ ತಿಳಿದುಬಂದಿದ್ದು, ಅಪಘಾತದ ನಿಖರ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ದಾಬಸ್ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Spread the love

Leave a Reply

Your email address will not be published. Required fields are marked *