ಬೆಂಗಳೂರು ಗ್ರಾಮಾಂತರ ಜೆಡಿಎಸ್‌ ಸೋಷಿಯಲ್ ಮೀಡಿಯಾ ಅಧ್ಯಕ್ಷರಾಗಿ ಎಂ. ನಾಗೇಶ್

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್‌ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾಗಿ ಎಂ. ನಾಗೇಶ್ ಅವರನ್ನು ನೇಮಕ ಮಾಡಲಾಗಿದೆ.

ಜೆಡಿಎಸ್‌ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷರಾದ ಚಂದನ್ ಹೆಚ್.ಎಸ್. ಅವರು ಎಂ. ನಾಗೇಶ್‌ ಅವರ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗವನ್ನು ಮತ್ತಷ್ಟು ಬಲಪಡಿಸುವುದು, ಪಕ್ಷದ ಕಾರ್ಯಕ್ರಮಗಳು, ಚಟುವಟಿಕೆಗಳು ಹಾಗೂ ಪಕ್ಷದ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಎಂ. ನಾಗೇಶ್‌ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ.

ಈ ಸಂದರ್ಭದಲ್ಲಿ ಜೆಡಿಎಸ್‌ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷರಾದ ಚಂದನ್ ಹೆಚ್.ಎಸ್., GBA ಅಧ್ಯಕ್ಷರಾದ ರಮೇಶ್ ಗೌಡ, ಕೋರ್ ಕಮಿಟಿ ಅಧ್ಯಕ್ಷರಾದ ಕೃಷ್ಣಾರೆಡ್ಡಿ, ವಕೀಲರ ಸಂಘದ ಅಧ್ಯಕ್ಷರಾದ ರಂಗನಾಥ್, ವಕೀಲರ ಸಂಘದ ಯುವ ಮುಖಂಡರಾದ ಪ್ರದೀಪ್ ಹಾಗೂ ನೆಲಮಂಗಲದ ಸಂತೋಷ್ ಉಪಸ್ಥಿತರಿದ್ದರು.

ಹೊಸ ಜವಾಬ್ದಾರಿ ಸ್ವೀಕರಿಸಿರುವ ಎಂ. ನಾಗೇಶ್‌ ಅವರಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶುಭ ಹಾರೈಸಿದರು.

Spread the love

Leave a Reply

Your email address will not be published. Required fields are marked *