ನೆಲಮಂಗಲ: ಲಾರಿ ಚಕ್ರಕ್ಕೆ ಸಿಲುಕಿ ನವವಿವಾಹಿತೆ ದಾರುಣ ಸಾ*

ನೆಲಮಂಗಲ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ರಸ್ತೆಗೆ ಬಿದ್ದಿದ್ದು, ಲಾರಿಯ ಹಿಂಬದಿ ಚಕ್ರ ಯುವತಿಯ ತಲೆ ಮೇಲೆ ಹರಿದು ಸ್ಥಳದಲ್ಲೇ ಮೃ*ಪಟ್ಟಿರುವ ದಾರುಣ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.

ಅಪಘಾತದಲ್ಲಿ ಮೃ*ಪಟ್ಟ ಯುವತಿಯನ್ನು ನಮಿತ (19) ಎಂದು ಗುರುತಿಸಲಾಗಿದೆ. ಆಕೆಯ ಪತಿ ಲೋಕೇಶ್ ಗಂಭೀರವಾಗಿ ಗಾಯಗೊಂಡಿದ್ದು, ಕೈ ಮೂಳೆ ಮುರಿದಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಮಿತ ಹಾಗೂ ಲೋಕೇಶ್ ಕಳೆದ ಒಂದು ವರ್ಷದ ಹಿಂದೆ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು ಎನ್ನಲಾಗಿದೆ. ಇಬ್ಬರೂ ತುಮಕೂರಿನಲ್ಲಿ ವಾಸವಾಗಿದ್ದು, ಕೆಲಸದ ನಿಮಿತ್ತ ಬೆಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಟಿ.ಬೇಗೂರು ಬಳಿ ತೆರಳುತ್ತಿದ್ದಾಗ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಲಾರಿ ಡಿಕ್ಕಿಯ ರಭಸಕ್ಕೆ ದಂಪತಿ ಬೈಕ್‌ನಿಂದ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಲಾರಿಯ ಹಿಂಬದಿ ಚಕ್ರ ನಮಿತ ಅವರ ತಲೆಯ ಮೇಲೆ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಲೋಕೇಶ್ ಅವರ ಕೈಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃ* ನಮಿತ ಅವರ ಮೃ* ದೇಹವನ್ನು ನೆಲಮಂಗಲದ ಶವಾಗಾರಕ್ಕೆ ರವಾನಿಸಲಾಗಿದೆ.

ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣ ಹಾಗೂ ಲಾರಿ ಚಾಲಕನ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಂದೇ ವರ್ಷ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಯ ಬದುಕಿನಲ್ಲಿ ನಡೆದ ಈ ದುರಂತದಿಂದ ಕುಟುಂಬಸ್ಥರಲ್ಲಿ ಆಕ್ರಂದನ ಮಡುಗಟ್ಟಿದೆ.

Spread the love

Leave a Reply

Your email address will not be published. Required fields are marked *