ಮೈಸೂರು: ಪತ್ರಿಕೋದ್ಯಮ, ಸಾಹಿತ್ಯ, ಶಿಕ್ಷಣ ಹಾಗೂ ಸಮಾಜಸೇವಾ ಕ್ಷೇತ್ರಗಳಲ್ಲಿನ ಸಾಧನೆಗಾಗಿ ರಾಜ್ಯ ಪ್ರಶಸ್ತಿ ವಿಜೇತ ಆನಂದ್ ಸಿ. ತಿರುಮಲ ಅವರಿಗೆ ‘ಕರ್ನಾಟಕ ಕೀರ್ತಿರತ್ನ ಪ್ರಶಸ್ತಿ-2026’ ಪ್ರದಾನ ಮಾಡಿ ಗೌರವಿಸಲಾಯಿತು.

ಮೈಸೂರು ದಸರಾ ಹಬ್ಬದ ಪ್ರಯುಕ್ತ ಸ್ವರ್ಣಭೂಮಿ ಫೌಂಡೇಷನ್, ಕರ್ನಾಟಕ; ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು ಜಿಲ್ಲೆ ಹಾಗೂ ಅಲೈ ಇಂಟರ್‌ನ್ಯಾಷನಲ್ ಕ್ಲಬ್ ಆಫ್ ಕರುನಾಡು, ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಬಿ. ಶಿವಕುಮಾರ್ ಅವರ ಸಾರಥ್ಯದಲ್ಲಿ ಮೈಸೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸ್ವರ್ಣಭೂಮಿ ಫೌಂಡೇಷನ್‌ನ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ. ಶಿವಕುಮಾರ್, ಅಲೈ ಇಂಟರ್‌ನ್ಯಾಷನಲ್ ಕ್ಲಬ್ ಆಫ್ ಕರುನಾಡು, ಮೈಸೂರಿನ ಅಧ್ಯಕ್ಷರಾದ ಡಾ. ನಾಗರಾಜ್ ವಿ. ಭೈರಿ, ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಜಿಲ್ಲೆಯ ಉಪಾಧ್ಯಕ್ಷರಾದ ಡಾ. ಬಿ. ತ್ಯಾಗರಾಜು, ಹಿರಿಯ ಪತ್ರಕರ್ತ ಶ್ರೀ ಅಂಶಿ ಪ್ರಸನ್ನಕುಮಾರ್, ರಂಗಭೂಮಿ ನಿರ್ದೇಶಕ ಹಾಗೂ ಸಾಹಿತಿ ಡಾ. ಇಂಚರ ನಾರಾಯಣಸ್ವಾಮಿ, ವಿಶೇಷ ಆಹ್ವಾನಿತರಾದ ಶ್ರೀಮತಿ ನಂದಾದೀಪ ಆರ್., ಶ್ರೀಮತಿ ವೈಶಾಲಿ ಯಾದವ್ ಬಳ್ಳಾರಿ, ಶ್ರೀ ಚಂದ್ರಶೇಖರ್ ಎ. ಹಾಗೂ ಶ್ರೀ ವೆಂಕಟೇಶಪ್ಪ ಡಿ. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಪ್ರಶಸ್ತಿ ಪುರಸ್ಕೃತರಾದ ಆನಂದ್ ಸಿ. ತಿರುಮಲ ಅವರು ಪತ್ರಕರ್ತ, ಕವಿ, ಲೇಖಕ, ಶಿಕ್ಷಣ ತಜ್ಞ ಹಾಗೂ ಸಮಾಜಸೇವಕರಾಗಿ ಗುರುತಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಎನ್‌ಇಟಿ ಎಜುಕೇಶನ್ ಅಕಾಡೆಮಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಕನ್ನಡ ಸಾಹಿತ್ಯದ ಬೆಳವಣಿಗೆ, ಶಿಕ್ಷಣದ ಪ್ರಸಾರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಗ್ರಾಮೀಣ ಹಿನ್ನೆಲೆಯಿಂದ ಬೆಳೆದುಬಂದು ವಿವಿಧ ಸವಾಲುಗಳನ್ನು ಎದುರಿಸುತ್ತಾ ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಮಾಜಸೇವಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಆನಂದ್ ಸಿ. ತಿರುಮಲ ಅವರಿಗೆ ಈ ಪ್ರಶಸ್ತಿ ಸಂದಿರುವುದು ಅವರ ಕಾರ್ಯಗಳಿಗೆ ಮತ್ತಷ್ಟು ಪ್ರೇರಣೆ ನೀಡಿದೆ.

ಮೈಸೂರು ದಸರಾ ಸಂಭ್ರಮದ ಅಂಗವಾಗಿ ನಡೆದ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸಲಾಯಿತು. ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಸೇವೆಗೆ ಕೊಡುಗೆ ನೀಡುತ್ತಿರುವ ಸಾಧಕರನ್ನು ಪ್ರೋತ್ಸಾಹಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.

Spread the love

Leave a Reply

Your email address will not be published. Required fields are marked *