ತಾಂಡವಪುರ: ಮೈಸೂರು ಜಿಲ್ಲೆ, ದಕ್ಷಿಣಕಾಶಿ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ನಗರಸಭೆ ಕಚೇರಿ ಆವರಣದಲ್ಲಿ ಇಂದು ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಸೂಕ್ತ ಪರಿಹಾರ ದೊರಕಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಶಾಸಕರು ತಮ್ಮ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪಂಚಾಯಿತಿ ಮತ್ತು ಹೋಬಳಿ ಮಟ್ಟದಲ್ಲಿ ಈಗಾಗಲೇ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸ್ತ್ರದಲ್ಲೇ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಸ್ಥಳದಲ್ಲಿಯೇ ಸೂಕ್ತ ಪರಿಹಾರವನ್ನು ಗುರುತಿಸಿಕೊಳ್ಳುವ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಿದ್ದು ಅದೇ ರೀತಿ ಇಂದು ನಂಜನಗೂಡು ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಸಣ್ಣಪುಟ್ಟ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡರು.
ಇದೇ ವೇಳೆ ಅಧಿಕಾರಿಗಳೊಂದಿಗೆ ಮಾತನಾಡುತ್ತಾ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಕಚೇರಿಗೆ ಬಂದರೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಸೂಕ್ತ ಪರಿಹಾರವನ್ನ ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ , ತಹಸೀಲ್ದಾರ್ ಸ್ಮಿತಾ ರಾಮು, ನಗರಸಭೆ ಪೌರಾಯುಕ್ತ ಬಸವರಾಜ್, ಇಒ ಜೆರಾಲ್ಡ್ ರಾಜೇಶ್, ಮಾಜಿ ನಗರಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ, ನಗರ ಬ್ಲಾಕ್ ಅಧ್ಯಕ್ಷರಾದ ಸಿ.ಎಂ. ಶಂಕರ್, ಗಾಯತ್ರಿ ಮೋಹನ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
