ಕಲಬುರಗಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಮೇಲೆ ಹಲ್ಲೆ ನಡೆಸಿ ಹ***ತ್ಯೆ ಮಾಡಿರುವ ಆರೋಪ ಕೇಳಿಬಂದಿರುವ ಘಟನೆ ಕಲಬುರಗಿ ತಾಲ್ಲೂಕಿನ ಬಸವನ ತಾಂಡಾದಲ್ಲಿ ನಡೆದಿದೆ.

ಮಹಿಳೆಯನ್ನು ನೀಲಾಬಾಯಿ ರಾಠೋಡ್ (32) ಎಂದು ಗುರುತಿಸಲಾಗಿದೆ. ಪತಿ ನಾಮದೇವ್ ರಾಠೋಡ್ ಪ್ರಕರಣದ ಆರೋಪಿಯಾಗಿದ್ದಾನೆ.

ಮಾಹಿತಿಯ ಪ್ರಕಾರ, ನೀಲಾಬಾಯಿ ಹಾಗೂ ನಾಮದೇವ್ ಸುಮಾರು ಹತ್ತು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ ಪತ್ನಿಯ ಮೇಲೆ ಅನುಮಾನ ವ್ಯಕ್ತಪಡಿಸಿ ನಾಮದೇವ್ ಆಗಾಗ ಜಗಳವಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಪದೇಪದೇ ಮನಸ್ತಾಪ ಉಂಟಾಗುತ್ತಿತ್ತು ಎಂದು ತಿಳಿದುಬಂದಿದೆ.

ದೀಪಾವಳಿ ಹಬ್ಬದ ವಿಚಾರವಾಗಿ ದಂಪತಿ ನಡುವೆ ಮತ್ತೆ ವಾಗ್ವಾದ ನಡೆದಿದ್ದು, ಈ ವೇಳೆ ಘಟನೆ ಸಂಭವಿಸಿದೆ ಎನ್ನಲಾಗಿದೆ. ಪತಿಯೇ ಕೊಡಲಿಯಿಂದ ಹ@ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Kalaburagi: An alleged domestic dispute turned fatal in Basavana Thanda of Kalaburagi taluk, where a woman was reportedly attacked and killed by her husband.

The deceased has been identified as Neelabai Rathod (32). Her husband, Namdev Rathod, has been named as the accused.

According to preliminary information, the couple had been married for around ten years. The husband allegedly suspected his wife and frequently argued with her, leading to repeated disagreements between them.

A fresh argument reportedly broke out over the celebration of Diwali, during which the incident allegedly took place. The husband is accused of attacking his wife with an axe.

A case has been registered at Farhatabad Police Station in connection with the incident. Police visited the scene, conducted an inspection and have initiated further investigation.

Spread the love

Leave a Reply

Your email address will not be published. Required fields are marked *