ತಾಂಡವಪುರ: ಇಡೀ ದೇಶದ ಗಮನ ಸೆಳೆದಿರುವ ಮುಖ್ಯಮಂತ್ರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿ ಸಿದ್ದರಾಮಯ್ಯನವರಿಗೆ ಹೂಗುಚ್ಛ ನೀಡಿ ಗೌರವಿಸಿ ಬೆಳಕಿನ ಹಬ್ಬ ದೀಪಾವಳಿಯ ಹಬ್ಬದ ಹಾರ್ದಿಕ ಶುಭಾಶಯ ಕೋರಿದರು.
ಅದೇ ರೀತಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ದೀಪಾವಳಿಯ ಹಬ್ಬದ ಹಾರ್ದಿಕ ಶುಭಾಶಯ ಕೋರಿ ಕೆಲವು ಸಮಯ ಮಾತುಕತೆ ನಡೆಸಿದರು.
ಈ ಹಬ್ಬದ ಸಂದರ್ಭದಲ್ಲಿ ಈಗಿನ ರಾಜಕೀಯ ಬೆಳವಣಿಗೆ ಮತ್ತು ರಾಜ್ಯದ ರೈತರು ಮತ್ತು ಸಾರ್ವಜನಿಕರ ಹಾಗೂ ಬಡವರ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು ಎಂದು ಹೇಳಲಾಗಿದ್ದು, ಈ ಸಂದರ್ಭದಲ್ಲಿ
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ರವರು ಹಾಗೂ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
