ಚಂಡೀಗಢ: ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬವೊಂದಕ್ಕೆ ಗುಂಡಿನ ದಾಳಿ ಎದುರಾಗಿದೆ. ಮನೆಯ ಹೊರಗೆ ಪಟಾಕಿ ಸಿಡಿಸುತ್ತಿದ್ದ 27 ವರ್ಷದ ಕುಸ್ತಿಪಟುವೊಬ್ಬನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಆತ ಹಸುನಿಗಿರುವ ಘಟನೆ ಪಂಜಾಬ್‌ನ ಕಪುರ್ತಲಾದಲ್ಲಿ ನಡೆದಿದೆ.

ಕಪುರ್ತಲಾದ ಮೊಹಲ್ಲಾ ಮೆಹ್ತಾಬ್‌ಗಢ ನಿವಾಸಿ ಮಣಿ ಅಲಿಯಾಸ್ ಪೈಲ್ವಾನ್ ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ದೀಪಾವಳಿ ಹಬ್ಬದ ಪ್ರಯುಕ್ತ ಮನೆಯ ಹೊರಗೆ ಪಟಾಕಿ ಸಿಡಿಸುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಮಣಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಪರೀಕ್ಷಿಸಿದ ವೈದ್ಯರು ಆತ ಕೊನೆಗೊಂಡಿರುವುದಾಗಿ ಘೋಷಿಸಿದ್ದಾರೆ. ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಮಗನ ಸುದ್ದಿ ಬರಸಿಡಿಲಿನಂತೆ ಅಪ್ಪಳಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮಣಿಯ ತಂದೆ ಬಗ್ಗಾ ಅವರ ಪ್ರಕಾರ, ಇತ್ತೀಚೆಗಷ್ಟೇ ಮಣಿಗೆ ವಿವಾಹವಾಗಿತ್ತು. ಆತನಿಗೆ ಯಾರೊಂದಿಗೂ ವೈಷಮ್ಯವಾಗಲಿ, ಜಗಳವಾಗಲಿ ಇರಲಿಲ್ಲ. ಇಂತಹ ಸಂದರ್ಭದಲ್ಲಿ ಮಗನ ಮೇಲೆ ದಾಳಿ ನಡೆದಿರುವುದು ಕುಟುಂಬಕ್ಕೆ ಆಘಾತ ತಂದಿದೆ ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು

ಗುಂಡಿನ ದಾಳಿ ನಡೆದಿರುವ ಕುರಿತು ಸಂಜೆ ಸುಮಾರು 7.30ರ ವೇಳೆಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಗುಂಡಿನ ದಾಳಿಯಿಂದ ಮಣಿ ಕೊನೆಗೊಂಡಿದರೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಹಲವು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳು, ಸಾಕ್ಷಿಗಳ ಹೇಳಿಕೆ ಹಾಗೂ ಇತರ ಲಭ್ಯ ಮಾಹಿತಿಗಳ ಆಧಾರದಲ್ಲಿ ತನಿಖೆ ಮುಂದುವರಿದಿದೆ.

ಘಟನೆಗೆ ಕಾರಣವೇನು?

ಮಣಿ ಅವರ ಮೇಲೆ ದಾಳಿ ನಡೆಸಲು ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇತ್ತೀಚೆಗಷ್ಟೇ ವಿವಾಹವಾಗಿದ್ದ ಯುವ ಕುಸ್ತಿಪಟುವಿನ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸಿ ಘಟನೆಯ ಹಿಂದಿನ ಸತ್ಯಾಂಶವನ್ನು ಬಹಿರಂಗಪಡಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

Spread the love

Leave a Reply

Your email address will not be published. Required fields are marked *