ಉ.ಪ್ರದೇಶ: ದಲಿತ ಮಹಿಳೆ ಮೇಲೆ ಅತ್ಯಾಚಾರ, ದೇಹ ತುಂಡರಿಸಿ ಆರೋಪಿಗಳು ನಾಪತ್ತೆ

40 ವರ್ಷದ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ, ಆನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಬಂಡಾದಲ್ಲಿ ನಡೆದಿದೆ. ಘಟನೆ ಕುರಿತು ಮಾಹಿತಿ ನೀಡಿದ ಸ್ಟೇಷನ್ ಹೌಸ್ ಆಫೀಸರ್ ಸಂದೀಪ್ ತಿವಾರಿ, ”ಮಂಗಳವಾರ ಮಹಿಳೆ ಆರೋಪಿ ರಾಜ್‌ಕುಮಾರ್ ಶುಕ್ಲಾ ಅವರ ಹಿಟ್ಟಿನ ಗಿರಣಿಯನ್ನು ಸ್ವಚ್ಛಗೊಳಿಸಲು ಮನೆಗೆ ತೆರಳಿದ್ದರು. ಸ್ವಲ್ಪ ಸಮಯದ ನಂತರ ಆ ಮಹಿಳೆಯ 20 ವರ್ಷದ ಮಗಳು ಶುಕ್ಲಾ ಅವರ ಮನೆಗೆ ಹೋಗಿದ್ದಾಳೆ, ಒಳಗಿನಿಂದ ಚಿಲಕ ಹಾಕಿದ ಕೊಠಡಿಯಿಂದ ತಾಯಿಯ ಕಿರುಚಾಟ ಕೇಳಿದೆ” ಎಂದು ತಿಳಿಸಿದರು. ಸ್ವಲ್ಪ ಸಮಯದ ನಂತರ ಕೋಣೆಯ ಬಾಗಿಲು ತೆರೆದಾಗ ಬಾಲಕಿ ತಾಯಿಯ ಶವ ಮೂರು ತುಂಡುಗಳಾಗಿ ಬಿದ್ದಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ರಾಜ್‌ಕುಮಾರ್ ಶುಕ್ಲಾ, ಅವರ ಸಹೋದರ ಬೌವಾ ಶುಕ್ಲಾ ಮತ್ತು ರಾಮಕೃಷ್ಣ ಶುಕ್ಲಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಎಚ್‌ಒ…

Read More

ದಲಿತ ಯುವಕನಿಗೆ ಜಾತಿ ನಿಂದನೆ, ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ

ದಲಿತ ಕೂಲಿ ಕಾರ್ಮಿಕನೋರ್ವನಿಗೆ ಜಾತಿ ನಿಂದಿಸಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 72 ವರ್ಷದ ವ್ಯಕ್ತಿಗೆ ಉತ್ತರಪ್ರದೇಶದ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಭದೋಹಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಸದ್ ಅಹ್ಮದ್ ಹಶ್ಮಿ ಅವರು 2002ರಲ್ಲಿ ನಡೆದ ಅಜೀತ್ ಕುಮಾರ್ (32) ಕೊಲೆ ಪ್ರಕರಣದಲ್ಲಿ ದೇವಿಚರಣ್ ವಿಶ್ವಕರ್ಮ ದೋಷಿ ಎಂದು ತೀರ್ಪು ನೀಡಿದ್ದು, ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು ಮತ್ತು 52,000 ರೂ.ದಂಡವನ್ನು ವಿಧಿಸಿದ್ದಾರೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (SC-ST) ಅನಿಲ್ ಕುಮಾರ್ ಶುಕ್ಲಾ ಅವರು ಈ ಘಟನೆ 2022ರ ಜು.18ರಂದು ಸಂಭವಿಸಿದೆ. ಆಕಾಶ್ ಮಿಶ್ರಾ ಎಂಬವರು ಮನೆ ನಿರ್ಮಾಣ ಮಾಡುತ್ತಿದ್ದರು ಮತ್ತು ದೇವಿಚರಣ್ ವಿಶ್ವಕರ್ಮ ಮತ್ತು ಮೃತ ಅಜೀತ್ ಕುಮಾರ್ ಅಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಅಜೀತ್ ಕುಮಾರ್ ಇತರ ಕಾರ್ಮಿಕರಿಗೆ ಚಹಾ ನೀಡುತ್ತಿದ್ದಾಗ ವಿಶ್ವಕರ್ಮ ಜಾತಿ ನಿಂದನೆ ಮಾಡಿದ್ದಾನೆ. ಇದಕ್ಕೆ ಅಜೀತ್ ಕುಮಾರ್ ವಿರೋಧವನ್ನು…

Read More

ಮೋದಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?: ಸಿಎಂ ಸಿದ್ದರಾಮಯ್ಯ

ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ’ ಎಂಬ ಅಭಿಯಾನವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ನಮ್ಮ ನಾಡು ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಕರ್ನಾಟಕವು ಸಾಗಿಬಂದ ಹಾದಿಯನ್ನು ಸ್ಮರಿಸಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ” ಎಂದು ಹೇಳಿದ್ದಾರೆ. “ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾಗಿರುವ ಅನುದಾನ, ತೆರಿಗೆಯಲ್ಲಿ ಪಾಲು, ಬರ ಮತ್ತು ಜಿಎಸ್‌ಟಿ ಪರಿಹಾರ ಪೂರ್ಣ ಪ್ರಮಾಣದಲ್ಲಿ ಬಂದಿಲ್ಲ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳು ಮತ್ತು ಐಬಿಪಿಎಸ್‌ ನೇಮಕಾತಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಎದುರಿಸಲು ಅವಕಾಶ ನೀಡದೆ ಲಕ್ಷಾಂತರ ಯುವ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ. ‘ಒಕ್ಕೂಟ ವ್ಯವಸ್ಥೆಯ ಮೂಲ ಆಶಯಕ್ಕೆ ಧಕ್ಕೆಯಾಗಿದೆ ಹೀಗಾಗಿ ಇದರ ವಿರುದ್ಧ…

Read More

ಬೆಂಗಳೂರು ಗ್ರಾಮಾಂತರ: ಅಂತರರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ

ನೆಲಮಂಗಲ: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಬೆಂಗಳೂರಿನಲ್ಲಿ ಆತ್ಮಹತ್ಯೆ ಅಂತರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ(25) ಅವರು ನೇಣಿಗೆ ಶರಣಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯ ಆದರ್ಶನಗರದ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆಗಿದ್ದ ಅವರು ಮೊನ್ನೆ ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಮನೆಗೆ ವಾಪಸ್ಸು ಬಂದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಅಂತರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮೀ, ಕಾಡುಗೋಡಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಧನಲಕ್ಷ್ಮಿ ಅವರ ಆತ್ಮಹತ್ಯೆ ಬಗ್ಗೆ ನೆಲಮಂಗಲ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಪ್ರಧಾನಿ ಮೋದಿ ಮಣಿಪುರಕ್ಕಿಂತ ಇಸ್ರೇಲ್‌ ಬಗ್ಗೆ ಕಳವಳಗೊಂಡಿದದ್ದಾರೆ – ರಾಹುಲ್‌ ಗಾಂಧಿ

ಐಜೋಲ್(ಮಿಜೋರಾಂ): ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕಿಂತ ಇಸ್ರೇಲ್ ನಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಹೆಚ್ಚು ಕಳವಳಗೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಟೀಕಿಸಿದ್ದಾರೆ. ಐಜೋಲ್ನ ರಸ್ತೆಗಳಲ್ಲಿ 2 ಕಿ.ಮೀ. ಪಾದಯಾತ್ರೆ ಕೈಗೊಂಡ ಬಳಿಕ ರಾಜಭವನದ ಸಮೀಪ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನೆರೆಯ ಮಣಿಪುರ ಏಕೀಕೃತ ರಾಜ್ಯವಾಗಿ ಉಳಿದಿಲ್ಲ. ಬದಲಾಗಿದೆ, ಅದು ಜನಾಂಗೀಯ ನೆಲೆಯಲ್ಲಿ ಎರಡು ರಾಜ್ಯಗಳಾಗಿ ವಿಭಜನೆಗೊಂಡಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಸರಕಾರ ಇಸ್ರೇಲ್ ನಲ್ಲಿ ಏನು ಸಂಭವಿಸುತ್ತಿದೆ ಎಂಬುದರ ಬಗ್ಗೆ ಆಸಕ್ತಿ ಹೊಂದಿದೆ. ಆದರೆ, ಜನರು ಹತ್ಯೆಗೀಡಾದ, ಮಹಿಳೆಯರು ಅತ್ಯಾಚಾರಕ್ಕೆ ಒಳಗಾದ, ಮಕ್ಕಳು ಕೊಲ್ಲಲ್ಪಟ್ಟ ಮಣಿಪುರದಲ್ಲಿ ಏನಾಗುತ್ತಿದೆ ಎಂಬ ಬಗ್ಗೆ ಆಸಕ್ತಿ ಇಲ್ಲ. ಇದು ನನಗೆ ಅಚ್ಚರಿ ಉಂಟು ಮಾಡಿದೆ ಎಂದು ಅವರು ಹೇಳಿದರು.

Read More

ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆʼ -ಪುನೀತ್ ಕೆರೆಹಳ್ಳಿ

”ರಾಜ್ಯ ಸರಕಾರ ನನ್ನ ಮನವಿ ಸ್ವೀಕರಿಸದಿದ್ದರೆ ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಹೇಳಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ರಾಜ್ಯ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ತನ್ನ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದ ಪುತ್ತೂರು‌ ಪುತ್ತಿಲ ಪರಿವಾರದ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರ ನಿಯೋಗದೊಂದಿಗೆ ಮಾತನಾಡುತ್ತಿದ್ದ ಪುನೀತ್‌, ”ನಾನು ನಿಮಗೆ ನಿಮ್ಮ ತಮ್ಮನಾಗಿ ಬೇಕು ಅಂದ್ರೆ, ಕಾಂಗ್ರೆಸ್‌ ಸರಕಾರದ ಯಾವುದಾದರೂ ಪ್ರತಿನಿಧಿ ನನ್ನನ್ನು ಭೇಟಿಯಾಗಿ, ನನ್ನ ಮನವಿಯನ್ನು ಸೀಕರಿಸಬೇಕು. ಅವರು ಬರದೇ ಇದ್ದರೆ ಬಸ್ಸಿಗೆ ಬೆಂಕಿ ಹಾಕುವ… ಪೊಲೀಸರನ್ನು ಜಾಗ ಬಿಡಲಿಕ್ಕೆ ಹೇಳಿ,…

Read More