ಕ್ಯಾಂಟರ್ ಪಲ್ಟಿ, ಸ್ಥಳದಲ್ಲೇ ಮೂವರು ಸಾವು – ಇಬ್ಬರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಕಲ್ಲು ಕೂಚ ಸಾಗಿಸುತ್ತಿದ್ದ ಕ್ಯಾಂಟರ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಹಿನ್ನೆಲೆ ಕ್ಯಾಂಟರ್ ನಲ್ಲಿ ಇದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯ ಆಸಿಗೆ ಮೇಲೆ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಕಣಿವೆ ಬಳಿ ಘಟನೆ ನಡೆದಿದ್ದು ಚಿಕ್ಕಬಳ್ಳಾಪುರ – ಗೌರಿ ಬಿದನೂರು ಮಾರ್ಗದಲ್ಲಿ ಕೆಲಸ ಕಾಲ ಸಂಚಾರ ದಟ್ಟನೆ ಉಂಟಾಗಿತ್ತು. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಚಿಕ್ಕ ತಿರುಪತಿಯಿಂದ ಚಿಕ್ಕಬಳ್ಳಾಪುರದ ಮಂಚೇನಹಳ್ಳಿಗೆ ಕೂಚದ ಕಲ್ಲುಗಳನ್ನ ಸಾಗಿಸಲಾಗುತ್ತಿತ್ತು. ಘಟನೆಗೆ ಕ್ಯಾಂಟರ್ ನಲ್ಲಿ ತುಂಬಿದ್ದ ಅಧಿಕ ತೂಕವೇ ಕಾರಣ ಎಂದು ಹೇಳಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅವಘದ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

Leave a Comment