ಪೋಷಕರೇ ಎಚ್ಚರ! ಎಚ್ಚರ! ಪೋಷಕರು ನೋಡಲೇಬೇಕಾದ ಸ್ಟೋರಿ: ಚಾಕೊಲೇಟ್ ನಲ್ಲಿ ಡ್ರಗ್ಸ್ ಮಿಕ್ಸ್ ಮಾಡಿ ಮಾರಾಟ!

ಮಂಗಳೂರು: ನಗರದಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೈಲ್ಯಾಂಡ್​​​​ ಬಳಿಯ ಅಂಗಡಿಯಲ್ಲಿ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ನರ್(45) ಬಾಂಗ್ ಮಿಶ್ರಿ ಚಾಕೊಲೇಟ್ ಮಾರುತ್ತಿದ್ದನು. ಈತನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿ ಇದ್ದ 5,500 ರೂ. ಮೌಲ್ಯದ ಬಾಂಗ್ ಚಾಕೊಲೇಟ್ ಜಪ್ತಿ ಮಾಡಿದ್ದಾರೆ. ಕಾರ್ ಸ್ಟ್ರೀಟ್ ಬಳಿ ಬಾಂಗ್ ಮಿಶ್ರಿ ಚಾಕೊಲೇಟ್ ಮಾರುತ್ತಿದ್ದ ಮನೋಹರ್ ಶೇಟ್ (49) ನನ್ನು ಮಂಗಳೂರು ಉತ್ತರ ಠಾಣಾ ಬಂಧಿಸಿದ್ದಾರೆ. ಆರೋಪಿಯಿಂದ 48,000 ರೂ. ಮೌಲ್ಯದ ಬಾಂಗ್ ಚಾಕೊಲೇಟ್​​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ (45) ಹಾಗೂ ಮಂಗಳೂರಿನ ಕಾರ್ ಸ್ಟ್ರೀಟ್ ನಿವಾಸಿ ಮನೋಹರ್ ಶೇಟ್ (49) ಪೊಲೀಸರು ವಶಕ್ಕೆ ಪಡೆದ ಆರೋಪಿಗಳಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರದ ಕಾರ್ ಸ್ಟ್ರೀಟ್ ಹಾಗೂ ಹೈಲ್ಯಾಂಡ್ ಎಂಬಲ್ಲಿನ ಅಂಗಡಿಗಳ…

Read More

ಕೊರಗಜ್ಜನಲ್ಲಿ ಹರಕೆ ಮಾಡಿಕೊಂಡ ರಚಿತಾ: ಕೊರಗಜ್ಜ ಕ್ಷೇತ್ರಕ್ಕೆ ಡಿಂಪಲ್ ಕ್ವೀನ್ ರಚಿತಾ ರಾಮ್ ಭೇಟಿ

ಮಂಗಳೂರು (ಮೆ. 31): ಮಂಗಳೂರು ಹೊರವಲಯದ ಕುತ್ತಾರಿನಲ್ಲಿರುವ ಕೊರಗಜ್ಜ  ಕ್ಷೇತ್ರಕ್ಕೆ ಸ್ಯಾಂಡಲ್ ವುಡ್ ಬೆಡಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ಭೇಟಿ ನೀಡಿ ಕೊರಗಜ್ಜನ ಆಶಿರ್ವಾದ ಪಡೆದಿದ್ದಾರೆ. ಮುಂಬರುವ ಚಿತ್ರಗಳಾದ ಮ್ಯಾಟ್ನಿ, ಬ್ಯಾಡ್ ಮ್ಯಾನರ್ಸ್, ಸೇರಿದಂತೆ ಹಲವು ಚಿತ್ರಗಳ ಯಶಸ್ಸಿಗೆ ನಟಿ ರವಿತಾ ರಾಮ್ ಪ್ರಾರ್ಥನೆ ಸಲ್ಲಿಸಿದ್ದಾರೆ. ಕೊರಗಜ್ಜ ಕ್ಷೇತ್ರದ ಭೇಟಿ ಬಳಿಕ ನಟಿ ರಚಿತಾ ರಾಮ್ ಮಾತನಾಡಿ ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು ಹಾಗಾಗಿ ನನಗೂ ಕೊರಗಜ್ಜ ದೈವದಲ್ಲಿ ಭಕ್ತಿಯಿಂದ ಪ್ರಾರ್ಥಿಸಬೇಕು ಅನ್ನಿಸಿತು. ಈ ಕ್ಷೇತ್ರ ಪ್ರಾಕೃತಿಕ ಸೌಂದರ್ಯವನ್ನು ಒಳಗೊಂಡು ತುಂಬಾ ಚೆನ್ನಾಗಿದೆ ನನ್ನ ಮುಂಬರುವ ಚಿತ್ರಗಳ ಬಗ್ಗೆ ಪ್ರಾರ್ಥಿಸಿದ್ದೇನೆ, ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ನಟಿ ರಚಿತಾ ರಾಮ್ ಹೇಳಿಕೆ.

Read More