ಜವಾಹರ ನವೋದಯ ವಿದ್ಯಾಲಯ 6 ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಜವಾಹರ ನವೋದಯ ವಿದ್ಯಾಲಯ 2024-25 ನೇ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆಗಳು ಕನಿಷ್ಠ 75 ರಷ್ಟು ಸ್ಥಾನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮೀಸಲಾಗಿರುತ್ತದೆ. ಕೇಂದ್ರ ಸರ್ಕಾರದ ನಿಯಮಾನುಸಾರ ದಿವ್ಯಾಂಗ, ಎಸ್.ಸಿ/ಎಸ್.ಟಿ, ಓ.ಬಿ.ಸಿ ವಿದ್ಯಾರ್ಥಿಗಳಿಗೆಮೀಸಲಾತಿ ಸೌಲಭ್ಯ ಒದಗಿಸಲಾಗುವುದು. ಹೆಣ್ಣು ಮಕ್ಕಳಿಗೆ 1/3 ರಷ್ಟು ಸ್ಥಾನಗಳು ಮೀಸಲಾಗಿರುತ್ತವೆ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 10.ಪ್ರವೇಶ ಪರೀಕ್ಷೆಯ ದಿನಾಂಕ 20-01-2024

Read More

All India general knowledge, Indian Talent ಪರೀಕ್ಷೆಯಲ್ಲಿ ಎಂ‌ಇಎಸ್ ಶಾಲಾ ವಿಧ್ಯಾರ್ಥಿಗಳ ಸಾಧನೆ.

ನೆಲಮಂಗಲ: ಇಂಡಿಯನ್ ಟಾಲೆಂಟ್ ಪರೀಕ್ಷೆ ಹಾಗೂ ಆಲ್ ಇಂಡಿಯಾ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ನಗರದ ಎಂ.ಇ.ಎಸ್.ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮೆರೆಸಿದ್ದಾರೆ.  ೨೦೨೨-೨೩ ನೇ ಸಾಲಿನಲ್ಲಿ ಕಳೆದ ೨೦೨೨ರ ನವೆಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ನಡೆದ  ಇಂಡಿಯನ್ ಟಾಲೆಂಟ್ ಪರೀಕ್ಷೆಯಲ್ಲಿ ೧೪೦ ವಿದ್ಯಾರ್ಥಿ ಭಾಗವಹಿಸಿದ್ದು ಸುಮಾರು ೧೪ ಮಂದಿ ವಿದ್ಯಾರ್ಥಿಗಳು ಅತ್ಯುತಮ ಶ್ರೇಣಿಯಲ್ಲಿ ಉತೀರ್ಣರಾದರೇ ಶಾಲೆಯ ೫ನೇ ತರಗತಿ ಸ್ನೇಹಾ ಎಂಬಾ ವಿದ್ಯಾರ್ಥಿನಿ ವಿಜ್ಞಾನ ವಿಷಯದಲ್ಲಿ ಹಾಗೂ ೧೦ನೇ ತರಗತಿ ಎಂ.ಡಿ.ಸಿಂಚನ ಎಂಬ ವಿದ್ಯಾರ್ಥಿನಿ ಸಮಾಜ ವಿಜ್ಞಾನದಲ್ಲಿ ೫ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಅಲ್ಲದೆ ಆಲ್ ಇಂಡಿಯಾ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ  ಶಾಲೆಯ ಸುಮಾರು ೫೬೦ ಮಂದಿ ವಿದ್ಯಾರ್ಥಿ ೫ ಮಂದಿ ಅತ್ಯುತಮ ಶ್ರೇಣಿಯಲ್ಲಿ ಉತೀರ್ಣರಾಗಿದ್ದು  ಅಕ್ಷಯ್ ಎಂಬ ವಿದ್ಯಾರ್ಥಿ ಇಂಡಿಯಾ ೩೭ ಬ್ಯಾಂಕ್ ಪಡೆದು ಸ್ಕಾಲರ್ ಶಿಪ್ ಪಡೆಯಲು ಅರ್ಹನಾಗಿರುತ್ತಾರೆ. ಜತೆಗೆ  ಶಾಲೆಗೆ “ಗೋಲ್ಡನ್ ಸ್ಕೂಲ್” ಎಂಬ…

Read More

ಸಿದ್ದಗಂಗಾ ಫೌಂಡೇಷನ್‌ ಟ್ರಸ್ಟ್‌ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ನೆಲಮಂಗಲ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಉನ್ನತ ಸಾಧನೆಗೆ ಪ್ರೇರಣೆಯಾಗಲಿದೆ ಎಂದು ರಂಗಶಿಕ್ಷಣ ಕೇಂದ್ರ ಸಂಸ್ಥಾಪಕ ಅಧ್ಯಕ್ಷ ಸಿ.ಸಿದ್ಧರಾಜು ತಿಳಿಸಿದರು. ತಾಲೂಕಿನ ಯಂಟಗಾನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬಾವಿಕೆರೆ ಗ್ರಾಮದಲ್ಲಿ ಭಾನುವಾರ ಶ್ರೀ ಸಿದ್ಧಗಂಗಾ ಫೌಂಡೇಶನ್ ಟ್ರಸ್‌ನಿಂದ ಆಯೋಜಿಸಿದ್ದ ನೂತನ ಟ್ರಸ್ಟ್ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಶೈಕ್ಷಣಿಗೆ ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಮಕ್ಕಳಿಗೆ ಒಳ್ಳೆಯ ಶಿಕ್ಷಣದ ಜತೆಗೆ ಸಮಾಜದೊಂದಿಗೆ ಬದುಕಲು ಬೇಕಾದ ಸಂಸ್ಕಾರಯುತ ಗುಣಗಳನ್ನು ಕಲಿಸುವ ಕೆಲಸ ಪಾಲಕರಿಂದ ಆಗಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸುವ ಧೈರ್ಯ ಆತ್ಮವಿಶ್ವಾಸವನ್ನು ಮಕ್ಕಳಲ್ಲಿ ಬೆಳೆಸಬೇಕು. ಶ್ರೀ ಸಿದ್ಧಗಂಗಾ ಮಠದ ಶಿವಕುಮಾರಸ್ವಾಮೀಜಿ ಅವರ ತತ್ವಾದರ್ಶನಗಳನ್ನು ಮುಂದಿಟ್ಟುಕೊಂಡು ಟ್ರಸ್ಟ್ ಮಾಡಿರುವ ಸಂತೋಷಕರ ಸಂಗತಿ. ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸಬೇಕಾದ ಸಮಾಜದ ಜವಬ್ದಾರಿ ಪ್ರತಿಭಾ ಪುರಸ್ಕಾರದಿಂದ ವಿದ್ಯಾರ್ಥಿಗಳ ಜತೆ ಸಮಾಜವಿದೆ ಎಂಬುದು ತಿಳಿಯಲಿದೆ. ಪ್ರತಿಭಾವಂತರು…

Read More

ತ್ಯಾಮಗೊಂಡ್ಲು ಲಕ್ಶ್ಮಿನಾರಾಯಣ ಟಿ ಎನ್ ರವರಿಗೆ ಡಾಕ್ಟರೇಟ್ ಪದವಿ.

ನೆಲಮಂಗಲ: ತ್ಯಾಮಗೊಂಡ್ಲು ಗ್ರಾಮದ ನಿವಾಸಿಗಳಾದ ನರಸಿಂಹಮೂರ್ತಿ.ಎಲ್ ಮತ್ತು ಲಕ್ಷ್ಮಮ್ಮ ದಂಪತಿಗಳ ಪುತ್ರರಾದ ಮತ್ತು ತುಮಕೂರಿನ ಶ್ರೀ ಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಿನಾರಾಯಣ ಟಿ ಎನ್ ರವರಿಗೆ ತುಮಕೂರು ವಿಶ್ವವಿದ್ಯಾನಿಲಯ ಡಾಕ್ಟರ್ ಆಫ್ ಫಿಲಾಸಫಿ ಪದವಿಯನ್ನು ಘೋಷಿಸಿದೆ. ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಚಿಕ್ಕಣ್ಣರವರ ಮಾರ್ಗದರ್ಶನದಲ್ಲಿ ಮಂಡಿಸಿದ “ಆದಿಚುಂಚನಗಿರಿ ಕ್ಷೇತ್ರವು ಮಹಿಳಾ ಸಬಲೀಕರಣಕ್ಕಾಗಿ ನೀಡಿರುವ ಕೊಡುಗೆಗಳು” ಎಂಬ ವಿಷಯದ ಮೇಲಿನ  ಸಂಶೋಧನಾ ಮಹಾ ಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾನಿಲಯ ಪಿಎಚ್‌ಡಿ ಪ್ರಧಾನ ಮಾಡಿ ಗೌರವಿಸಿದೆ. ಗ್ರಾಮಸ್ಥರು ಮತ್ತು ವಿದ್ಯಾರ್ಥಿ ವೃಂದ, ಪ್ರಾಧ್ಯಾಪಕ ವರ್ಗದವರು ಲಕ್ಷ್ಮಿನಾರಾಯಣರನ್ನು ಅಭಿನಂದಿಸಿದ್ದಾರೆ.

Read More

ಕುವೆಂಪು ವಿವಿ ಕುಲಪತಿ ಹಾಗೂ ಇತರ ಇಬ್ಬರು ಅಧಿಕಾರಿಗಳ ವಿರುದ್ದ ತನಿಖೆಗೆ ರಾಜ್ಯ ರಾಜ್ಯ ಸರ್ಕಾರ ಆದೇಶ

ಶಿವಮೊಗ್ಗ(ಜೂ 03): ಕುವೆಂಪು ವಿವಿ ಕುಲಪತಿ ಹಾಗೂ ಇತರ ಇಬ್ಬರು ಅಧಿಕಾರಿಗಳ ವಿರುದ್ದ ತನಿಖೆಗೆ ರಾಜ್ಯ ರಾಜ್ಯ ಸರ್ಕಾರ ಆದೇಶ ಮಾಡಿದ್ದು ನಿವೃತ್ತ ನ್ಯಾಯಾದೀಶರೊಬ್ಬರ ಅಧ್ಯಕ್ಷತೆಯಲ್ಲಿ ತನಿಖಾ ಸಮಿತಿಯನ್ನು ರಚನೆ ಮಾಡಿದೆ. ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಕುಲಸಚಿವ (ಪರೀಕ್ಷಾಂಗ) ಹಾಗೂ ಕುವೆಂಪು ವಿಶ್ವವಿದ್ಯಾಲಯದ ದೂರ ಶಿಕ್ಷಣ ವಿಭಾಗದ ನಿರ್ದೇಶಕರ ವಿರುದ್ದ ತನಿಖೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಏನು ಪ್ರಕರಣ: 2019ರಲ್ಲಿ ದೂರ ಶಿಕ್ಷಣದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಕುವೆಂಪು ವಿವಿ ಫಲಿತಾಂಶ ಪ್ರಕಟಿಸಿತ್ತು. ಪ್ರಥಮ ಮತ್ತು ದ್ವಿತೀಯ ವರ್ಷದ ಸ್ನಾತಕ ಮತ್ತು ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಫಲಿತಾಂಶ ನೀಡಿದ್ದ ವಿಶ್ವವಿದ್ಯಾಲಯ. ಈ ಬಗ್ಗೆ ಸಿಂಡಿಕೇಟ್ ಸದಸ್ಯ ಸಂತೋಷ್ ಬಳ್ಳಕೆರೆ ಹಾಗೂ ಆರ್ಟಿಐ ಕಾರ್ಯಕರ್ತ ಗಜಾನನ ದಾಸ್ ಕೆ.ಜಿ ಹಾಗೂ ಎಸ್.ಎಂ ಮಹಾದೇವಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದರು. ಆನೆ ದಂತ…

Read More

ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕ ಬಸವರಾಜು ನಿಧನ

ಡಾಬಸ್‌ಪೇಟೆ : ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೋಂಪುರ ಹೋಬಳಿಯ ಬಾಪೂಜಿನಗರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕರಾಗಿದ್ದ ಬಸವರಾಜು ಟಿ.ಎಲ್. (45) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತ ಬಸವರಾಜು ಟಿ.ಎಲ್ ಇವರು ಸೋಂಪುರ ಹೋಬಳಿಯ ತಟ್ಟೆಕೆರೆ ಗ್ರಾಮದವರಾಗಿದ್ದು, ದಾಬಸ್‌ಪೇಟೆ ಪಟ್ಟಣದ ಹೊನ್ನಮ್ಮ ಲೇಔಟ್‌ನಲ್ಲಿ ತಮ್ಮ ಪತ್ನಿಯೊಂದಿಗೆ ವಾಸವಾಗಿದ್ದರು. ಇವರು ಮೇ.12 ರಂದು ಸುಮಾರು ಸಂಜೆ 5 ಗಂಟೆಯ ಸಮಯದಲ್ಲಿ ಬಸವಾಪಟ್ಟಣ ಕಡೆಯಿಂದ ದಾಬಸ್‌ಪೇಟೆ ಕಡೆಗೆ ತಮ್ಮ ಬೈಕ್‌ನಲ್ಲಿ ಬರುವಾಗ ಕಂಬಾಳು ಮಠದ ಸಮೀಪ ಅಪಘಾತವಾಗಿತ್ತು. ಅವರನ್ನು ಸ್ಥಳೀಯರು ಬೆಂಗಳೂರಿನ ಗೊರಗುಂಟೆಪಾಳ್ಯದ ಸ್ಪರ್ಶ್ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಮೇ.೩೦ರಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತ ಶಿಕ್ಷಕ ಬಸವರಾಜು ಸರ್ಕಾರಿ ವಿದ್ಯಾ ಇಲಾಖೆ ನೌಕರರ ಸಂಘದ ಉಪಾಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಕಾರ್ಯದರ್ಶಿಯಾಗಿ, ಸೇವೆ ಸಲ್ಲಿಸಿದ್ದಾರೆ.ಮೃತರ ಆತ್ಮಕ್ಕೆ ಶಾಸಕ ಎನ್.ಶ್ರೀನಿವಾಸ್, ಬಿಇಒ ತಿಮ್ಮಯ್ಯ, ಶಿಕ್ಷಣ ಇಲಾಖೆಯ ಸಂಯೋಜಕಿ…

Read More