HASSAN: ಅನುಮಾನದ ಭೂತ ಹೊಕ್ಕಿತ್ತು, ತಾಳಿ ಕಟ್ಟಿದ ಮಡದಿಯನ್ನು ಕ್ರೂರಾತಿಕ್ರೂರವಾಗಿ ಕೊಂದ

ಕೆಲಸಕ್ಕೆ ಹೋಗುವ ಪತ್ನಿಯ ಮೇಲೆ ವಿನಾಕಾರಣ ಅನುಮಾನದ ಪೀಡೆ ನೆತ್ತಿಗೇರಿಸಿಕೊಂಡು ಆಕೆಯನ್ನ ಹಿಂಬಾಲಿಸೋಕೆ ಶುರು ಮಾಡಿದ್ದ ಪತಿರಾಯ ಕಡೆಗೆ ಆಕೆಯ ನಡತೆ ಬಗ್ಗೆ ಅನುಮಾನಗೊಂಡು ಆಕೆಯನ್ನ ಬರ್ಬರವಾಗಿ ಕೊಂದು ಪೊಲೀಸರಿಗೆ ಶರಣಾಗಿದ್ದಾನೆ.ಹಾಸನ, ಜುಲೈ 21: ಅನುಮಾನ ಅನ್ನುವ ಭೂತ ತಲೆಯೊಳಗೆ ಹೊಕ್ಕಿಬಿಟ್ಟರೆ ಅದೆಂತಹ ಸಂಬಂಧಕ್ಕೂ ಅಲ್ಲಿ ಬೆಲೆ ಇರೋದಿಲ್ಲ, ದಶಕಗಳ ಸಹಬಾಳ್ವೆಗೂ ಅಲ್ಲಿ ನೆಲೆ ಇರೋದಿಲ್ಲ, ದಶಕದ ಹಿಂದೆ ಮದುವೆಯಾಗಿ ಇಬ್ಬರು ಮುದ್ದಾದ ಮಕ್ಕಳನ್ನೂ ಹೊಂದಿದ್ದ ಆ ದಂಪತಿ ನಡುವೆ ಪತಿಯ ತಲೆ ಹೊಕ್ಕಿದ್ದ ಅದೊಂದು ಅನುಮಾನ ಮಾಡಬಾರದ್ದನ್ನ ಮಾಡಿಸಿಬಿಟ್ಟಿದೆ. ಕುಡಿತದ ಚಟಕ್ಕೆ ದಾಸನಾಗಿದ್ದ ಗಂಡ, ತನಗೆ ಸರಿಸಮಾನವಾಗಿ ಸಂಸಾರದ ನೊಗ ಹೊತ್ತಿದ್ದ ಮಡದಿಯ ಮೇಲೆ ಅನುಮಾನ ಪಡೋಕೆ ಶುರು ಮಾಡಿದ್ದ ಗಂಡ ಆಕೆ ಹೋದಲ್ಲೆಲ್ಲಾ ಹಿಂಬಾಲಿಸೋದು, ದುಡಿದ ಹಣದಲ್ಲಿ ಕುಡಿದು ಮಸ್ತಿ ಮಾಡೋದು, ಮತ್ತೆ ವ್ಯವಹಾರಕ್ಕೆ ತವರು ಮನೆಯಿಂದ ಹಣ ತಗೊಂಬಾ ಅಂತಾ ಪೀಡಿಸ್ತಿದ್ದನಂತೆ. ಹತ್ತಾರು…

Read More