ನೆಲಮಂಗಲ ತಾಲೂಕಿನ ಟಿ.ಬೇಗೂರಿನಲ್ಲಿ ಬೈಕ್ನಲ್ಲಿ ಬೆಂಗಳೂರಿನತ್ತ ತೆರಳುತ್ತಿದ್ದ ದಂಪತಿ ಲಾರಿ ಡಿಕ್ಕಿಯಿಂದ ಅಪಘಾ*ತಕ್ಕೀಡಾಗಿದ್ದಾರೆ.
ಅಪಘಾತದಲ್ಲಿ 19 ವರ್ಷದ ನಮಿತ ಮೃ*ತಪಟ್ಟಿದ್ದು, ಅವರ ಪತಿ ಲೋಕೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಲೋಕೇಶ್ ಅವರ ಕೈ ಮೂಳೆ ಮುರಿದಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಮಿತ ಮತ್ತು ಲೋಕೇಶ್ ಕಳೆದ ಒಂದು ವರ್ಷದ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು ಎನ್ನಲಾಗಿದ್ದು, ಇಬ್ಬರೂ ತುಮಕೂರಿನಲ್ಲಿ ವಾಸವಾಗಿದ್ದರು. ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾ*ತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಮಿತ ಅವರ ಮೃ*ತದೇಹವನ್ನು ನೆಲಮಂಗಲ ಶವಾಗಾರಕ್ಕೆ ರವಾನಿಸಲಾಗಿದೆ.
