ಮೈಸೂರು ದಸರಾ ಪ್ರಯುಕ್ತ ಅರಮನೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಸಮೂಹ ವಾದ್ಯ ಮೇಳ ಕಾರ್ಯಕ್ರಮದಲ್ಲಿ ಭಾಗಿಯಾದ ಗೃಹ ಸಚಿವ ಪ್ರಿಯಾಂಕ ಖರ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ಶಾಸಕರು

ತಾಂಡವಪುರ ಅಕ್ಟೋಬರ್ 17 ಮೈಸೂರು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಅರಮನೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ‘ಸಮೂಹ ವಾದ್ಯಮೇಳ’ ಕಾರ್ಯಕ್ರಮದಲ್ಲಿ ರಾಜ್ಯ ಗೃಹ ಸಚಿವ ಪ್ರಿಯಾಂಕ ಖರ್ಗೆ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರು ಆದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯನವರು ಹಾಗೂ ಶಾಸಕರಾದ ಕೆ ಹರೀಶ್ ಗೌಡ ಡಾ. ಡಿ ತಿಮ್ಮಯ್ಯ ಶ್ರೀವತ್ಸ ಹಾಗೂ ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮೆಚ್ಚುಗೆ ವ್ಯಕ್ತಪಡಿಸಿದರು
ಇತ್ತೀಚೆಗೆ ಪೊಲೀಸ್ ಬ್ಯಾಂಡ್ ವಾದ್ಯಗೋಷ್ಠಿ ನಶಿಸಿಹೋಗುತ್ತಿದ್ದು ಇದನ್ನು ಮತ್ತೆ ಚಾಲ್ತಿಗೆ ಬರಬೇಕು ಎಂದು ಪೊಲೀಸ ಇಲಾಖೆ ಮಾಧ್ಯಗೋಷ್ಠಿ ಸಿಬ್ಬಂದಿಗಳೊಡನೆ ಸಂಗೀತ ಪ್ರಸ್ತುತಿಯನ್ನು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮ ಜನರ ಗಮನ ಸೆಳೆಯಿತು


ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗೂ ಪಾಶ್ಚಾತ್ಯ ಸಂಗೀತದ ಸಮ್ಮಿಲನ, ವಿಶೇಷವಾಗಿ ‘ಎಲ್ಲೋ ಜೋಗಪ್ಪ’ ಸೇರಿದಂತೆ ಇಳಯರಾಜ ಅವರ ಸಂಗೀತ ಸಂಯೋಜನೆಯ ಮಧುರ ಗೀತೆಗಳು ನೆರೆದಿದ್ದವರ ಮನಸೂರೆಗೊಂಡವು.
ಶಿಸ್ತು, ಕಲಾತ್ಮಕತೆ ಹಾಗೂ ಸಂಗೀತದ ಸೊಬಗಿನೊಂದಿಗೆ ದಸರಾ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದ ಈ ವಾದ್ಯಮೇಳದ ಪ್ರಸ್ತುತಿ ಅವಿಸ್ಮರಣೀಯ ಎಂದು ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಬಣ್ಣಿಸಿದರು
ಈ ಸಾಂಸ್ಕೃತಿಕ ಹಾಗೂ ಭವ್ಯ ಸಮಾರಂಭದಲ್ಲಿ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ಶಾಸಕರಾದ ಕೆ. ಹರೀಶ್ ಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಹಿರಿಯ ಪತ್ರಕರ್ತರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ. ಶಿವಕುಮಾರ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮಿಕಾಂತ್ ರೆಡ್ಡಿ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸಿ. ನರೇಂದ್ರ,ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ. ಎ. ಸಲೀಂ, ಮೈಸೂರು ನಗರದ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್ ಹಾಗೂ ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು

Spread the love

Leave a Reply

Your email address will not be published. Required fields are marked *