ತುಮಕೂರು: ದಸರಾ ಮಹೋತ್ಸವದ ಸಂದರ್ಭದಲ್ಲಿ ನಗರದ ಸ್ವಚ್ಛತೆಗೆ ಶ್ರಮಿಸಿದ ಪೌರಕಾರ್ಮಿಕರನ್ನು ಸನ್ಮಾನಿಸುವುದಾಗಿ ಕರೆಸಿ, ಬಳಿಕ ಪೊಲೀಸರು ಹಾಗೂ ಅಧಿಕಾರಿಗಳು ಅವಮಾನಿಸಿದ್ದಾರೆ ಎಂದು ಆರೋಪಿಸಿ ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸನ್ಮಾನ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿದಾಗ ಇನ್ಸ್‌ಪೆಕ್ಟರ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಏಕವಚನದಲ್ಲಿ ನಿಂದಿಸಿ, ಸ್ಥಳದಿಂದ ತೆರಳುವಂತೆ ಒತ್ತಾಯಿಸಿದ್ದಾರೆ ಎಂದು ಕಾರ್ಮಿಕರು ದೂರಿದ್ದಾರೆ. ನಗರದ ಸ್ವಚ್ಛತೆಗಾಗಿ ಪ್ರಾಮಾಣಿಕವಾಗಿ ದುಡಿಯುವ ತಮ್ಮನ್ನು ಗೌರವಿಸುವ ಬದಲು ಅವಮಾನಿಸಿರುವುದು ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕರ್ತವ್ಯ ನಿರತ ಪೌರಕಾರ್ಮಿಕರಿಗೆ ಯಾವುದೇ ರೀತಿಯ ನಿಂದನೆ ಅಥವಾ ಕಿರುಕುಳ ನೀಡಬಾರದು. ಈ ಕುರಿತು ಮೇಲಧಿಕಾರಿಗಳು ಲಿಖಿತ ಭರವಸೆ ನೀಡಬೇಕು ಹಾಗೂ ಘಟನೆಗೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೌರಕಾರ್ಮಿಕರು ಒತ್ತಾಯಿಸಿದ್ದಾರೆ.

Spread the love

Leave a Reply

Your email address will not be published. Required fields are marked *