ತಾಂಡವಪುರ: ಮೈಸೂರು ಜಿಲ್ಲೆ, ಸರಗೂರು ತಾಲೂಕು ಆಗತ್ತೂರು ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ
ಉದ್ಘಾಟನಾ ಮಹೋತ್ಸವದಲ್ಲಿ ಭಾಗಿಯಾದ ಶ್ರೀ ಪ್ರಸನ್ನಾನಂದಪುರಿ ಮಹಾ ಸ್ವಾಮೀಜಿ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅನಿಲ್ ಚಿಕ್ಕಮಾದು ಗಣೇಶ್ ಪ್ರಸಾದ್ ಭಾಗಿಯಾಗಿ ಶ್ರೀ ಮಹರ್ಷಿ ವಾಲ್ಮೀಕಿ ರವರನ್ನು ಸ್ಮರಿಸಿದರು.
ಪರಮಪೂಜ್ಯ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ, ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಪಾಲ್ಗೊಂಡು, ಪುತ್ಥಳಿಯನ್ನು ಅನಾವರಣಗೊಳಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಆದರ್ಶಗಳು ಸಮಾಜದಲ್ಲಿ ಸಮಾನತೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಲು ಸದಾ ಪ್ರೇರಣೆಯಾಗಿವೆ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ನ್ಯಾಯಯುತ ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಕೈಜೋಡಿಸೋಣ ಎಂದು ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಅನಿಲ್ ಚಿಕ್ಕಮಾದು ದರ್ಶನ್ ಧ್ರುವನಾರಾಯಣ್ ಗಣೇಶ್ ಪ್ರಸಾದ್ ರವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಸಿ ಬಸವರಾಜ್, ರಾಮಚಂದ್ರು ಹೀರೆಗೌಡ, ನರಸಿಂಹಮೂರ್ತಿ ಸೋಮೇಶ್ , ದೊಡ್ಡ ನಾಯಕ , ಜೆ. ಪ್ರಕಾಶ್ ಕಾಟೂರು, ದೇವರಾಜ್ ಶಂಭುಲಿಂಗ ನಾಯಕ, ನಾಗರಾಜ್ ಅಪ್ಪಣ್ಣ , ಸದಾನಂದ್ , ಕೃಷ್ಣ ರವರು ಸೇರಿದಂತೆ ಗ್ರಾಮದ ಮುಖಂಡರು ಗ್ರಾಮಸ್ಥರು ಹಾಜರಿದ್ದರು.
