ತಾಂಡವಪುರ : ಮೈಸೂರು ಜಿಲ್ಲೆ, ದಕ್ಷಿಣ ಕಾಶಿ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ಚಾಮರಾಜನಗರ ಟಿ ನರಸಿಪುರ ಮುಖ್ಯ ರಸ್ತೆ ಬಳಿಯಲ್ಲಿರುವ ಇಂದಿರಾ ಇಂದಿರಾ ಕ್ಯಾಂಟೀನ್ ಗೆ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಭೇಟಿ ನೀಡಿ, ಅಡುಗೆ ಕೊಠಡಿ ಹಾಗೂ ಸುತ್ತಮುತ್ತಲಿನ ಸ್ವಚ್ಛತೆ ಮತ್ತು ಪರಿಸರವನ್ನು ಪರಿಶೀಲನೆ ನಡೆಸಿದರು.


ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆ ಆದ ಈ ಇಂದಿರ ಕ್ಯಾಂಟೀನ್ ಯೋಜನೆಗೆ ಸಾಕಷ್ಟು ಅನುದಾನ ನೀಡಿ ಬಡವರ ಹಸಿವು ನೀಗಿಸುವ ಕ್ಯಾಂಟೀನ್ಆ ಗಿದ್ದು ಕ್ಯಾಂಟೀನ್‌ನಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಿ, ಆಹಾರದ ಗುಣಮಟ್ಟವನ್ನು ಪರಿಶೀಲಿಸಿದ ಶಾಸಕರು, ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವುದು ಇಂದಿರಾ ಕ್ಯಾಂಟೀನ್‌ನ ಮುಖ್ಯ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಸೌಲಭ್ಯಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಶಾಸಕರು ಸೂಚನೆ ನೀಡಿದರು.


ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ಹಾಗೂ ಕಾಂಗ್ರೆಸ್ ಮುಖಂಡರು ಮುಂತಾದವರು ಹಾಜರಿದ್ದರು.

Spread the love

Leave a Reply

Your email address will not be published. Required fields are marked *