Category: ಅಪರಾಧ

ಪಾಗಲ್ ಪ್ರೇಮಿಯ ಅಟ್ಟಹಾಸಕ್ಕೆ ವಿವಾಹಿತ ಮಹಿಳೆ ಆತ್ಮ*ತ್ಯೆ

ಬೆಂಗಳೂರು: ಪಾಗಲ್‌ ಪ್ರೇಮಿಯ ನಿರಂತರ ಕಿರುಕುಳ ಹಾಗೂ ಬೆದರಿಕೆಯಿಂದ ಬೇಸತ್ತು ವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಇಂದಿರಾನಗರದ ಲಕ್ಷ್ಮೀಪುರಂನಲ್ಲಿ ನಡೆದಿದೆ. ಆಗಸ್ಟ್‌ 6ರಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸ್‌ ತನಿಖೆ ವೇಳೆ ಪ್ರಕರಣದ ಹಿಂದಿನ ಕಾರಣ ತಡವಾಗಿ ಬೆಳಕಿಗೆ ಬಂದಿದೆ.…

ಮೊಬೈಲ್ ಆಸೆಗೆ ಅಜ್ಜನನ್ನೇ ಕೊ* ಮಾಡಿಸಿದ ಬಾಲಕಿ

ತಿರುವನಂತಪುರಂ: ಕೇರಳದ ಅಲಪ್ಪುಳದಲ್ಲಿ 67 ವರ್ಷದ ವ್ಯಕ್ತಿಯ ಕೊಲೆ ಪ್ರಕರಣ ಇದೀಗ ಬೆಚ್ಚಿಬೀಳಿಸುವ ತಿರುವು ಪಡೆದುಕೊಂಡಿದೆ. ಸ್ವಂತ ಮೊಮ್ಮಗಳೇ ಅಜ್ಜನ ಕೊಲೆಗೆ ಸಂಚು ರೂಪಿಸಿದ್ದು, ನಾಲ್ವರು ಹದಿಹರೆಯದವರನ್ನು ಮನೆಗೆ ಕಳುಹಿಸಿ ಕೊಲೆ ಮಾಡಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಕೊಲೆ…

5 ವರ್ಷದ ಮಗನೊಂದಿಗೆ ತಂದೆ ಶ*ವಾಗಿ ಪತ್ತೆ: ಕೊ* ಶಂಕೆಯಲ್ಲಿ ಪೊಲೀಸರ ತನಿಖೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ ಐದು ವರ್ಷದ ಮಗ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಒಂದೇ ಮನೆಯಲ್ಲಿ ತಂದೆ-ಮಗ ಇಬ್ಬರೂ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಮೇಲ್ನೋಟಕ್ಕೆ ಇಬ್ಬರ ಸಾವಿನ ಹಿಂದೆಯೂ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.…

ಮನೆಬಿಟ್ಟು ಪ್ರಿಯಕರನ ಜೊತೆ ತೆರಳಿದ್ದ ಯುವತಿ ಬಾವಿಯಲ್ಲಿ ಶ*ವಾಗಿ ಪತ್ತೆ

ಚಿತ್ರದುರ್ಗ: ನವವಿವಾಹಿತೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಾರಿಪಾಲಯ್ಯನಹಟ್ಟಿ ಮೂಲದ ಸುಮಲತಾ (21) ಎಂದು ಗುರುತಿಸಲಾಗಿದೆ. ಸುಮಲತಾ ಅವರು ಆಗಸ್ಟ್ 13ರಂದು ಮನೆಬಿಟ್ಟು ಗಜೇಂದ್ರ ಎಂಬುವವರೊಂದಿಗೆ ತೆರಳಿದ್ದರು ಎನ್ನಲಾಗಿದೆ. ಬಳಿಕ…

ನೆಲಮಂಗಲದಲ್ಲಿ ಆನ್‌ಲೈನ್ ಗೇಮಿಂಗ್ ದುರಂತ! : ಸಾಲಬಾಧೆಗೆ ಹೆದರಿ ಗೃಹಿಣಿ ಆತ್ಮ*ತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಒಳಗಾಗಿ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು ಸಾಲದ ಹೊರೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕುಟುಂಬಸ್ಥರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಮೃತರನ್ನು…

ಜೈಲಿನಲ್ಲೇ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಎಫ್‌ಐಆರ್ ದಾಖಲು

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸೆಲ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದೆ. ಸಿಸಿಬಿ ಅಧಿಕಾರಿಗಳು…

ಅ*ಚಾರ, ಬೆದರಿಕೆ ಆರೋಪ: ಕ್ರಿಕೆಟಿಗ ಅಭಿಷೇಕ್ ಪೊರೆಲ್ ಅರೆಸ್ಟ್

ಕೋಲ್ಕತಾ: ಅತ್ಯಾಚಾರ, ಹಲ್ಲೆ ಹಾಗೂ ಕ್ರಿಮಿನಲ್ ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಬಂಗಾಳದ ಯುವ ಕ್ರಿಕೆಟಿಗ ಹಾಗೂ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡಿರುವ ಅಭಿಷೇಕ್ ಪೊರೆಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾ ಹೈಕೋರ್ಟ್ ಇತ್ತೀಚೆಗೆ ಆರೋಪದ ಗಂಭೀರತೆಯನ್ನು…

ಭೀಮನ ಅಮಾವಾಸ್ಯೆ ದಿನವೇ ಗಂಡನನ್ನು ಕೊಂ* ಪತ್ನಿ

ಕೋಲಾರ: ಭೀಮನ ಅಮವಾಸ್ಯೆ ದಿನ ಗಂಡನಿಗೆ ಪೂಜೆ ಸಲ್ಲಿಸಬೇಕಿದ್ದ ಪತ್ನಿಯೇ ಆತನನ್ನು ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಚೆನ್ನಸಂದ್ರ ಗ್ರಾಮದಲ್ಲಿ ನಡೆದಿದೆ. ಹಣಕಾಸಿನ ವಿಚಾರವಾಗಿ ದಂಪತಿ ನಡುವೆ ಉಂಟಾಗಿದ್ದ ಅಸಮಾಧಾನ ಕೊಲೆಯಲ್ಲಿ ಅಂತ್ಯವಾಗಿದ್ದು, ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದೆ. ಮೃತ…

ನೆಲಮಂಗಲ: ನಕಲಿ ಆರ್‌ಟಿಒ ಅಧಿಕಾರಿಗಳನ್ನ ಹಿಡಿದ ಕೆಆರ್‌ಎಸ್ ಕಾರ್ಯಕರ್ತರು!

ನೆಲಮಂಗಲ: ಆರ್‌ಟಿಒ ಅಧಿಕಾರಿಗಳ ಸೋಗಿನಲ್ಲಿ ವಾಹನ ತಪಾಸಣೆ ನಡೆಸಿ ಲಾರಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಕೆಆರ್‌ಎಸ್ ಕಾರ್ಯಕರ್ತರು ಹಿಡಿದ ಘಟನೆ ನೆಲಮಂಗಲದ ಕುಲುವನಹಳ್ಳಿ ಬಳಿ ನಡೆದಿದೆ. ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂವರು ನಕಲಿ ಅಧಿಕಾರಿಗಳು ವಾಹನಗಳನ್ನು…

ಮೊಬೈಲ್ ಕೊಡಿಸಲಿಲ್ಲವೆಂದು 13 ವರ್ಷದ ಬಾಲಕ ನೇ*ಗೆ ಶರಣು

ಹಾಸನ: ಮೊಬೈಲ್ ಫೋನ್ ಕೊಡಿಸದಿದ್ದಕ್ಕೆ ಮನನೊಂದ 13 ವರ್ಷದ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಹಾಸನ ನಗರದ ಹೊರವಲಯದ ಯಡಿಯೂರು ಗ್ರಾಮದಲ್ಲಿ ನಡೆದಿದೆ. ಈ ದುರ್ಘಟನೆ ಕುಟುಂಬಸ್ಥರನ್ನು ತೀವ್ರ ಆಘಾತಕ್ಕೆ ತಳ್ಳಿದ್ದು, ಗ್ರಾಮದಲ್ಲೂ ಶೋಕದ ವಾತಾವರಣ ನಿರ್ಮಾಣವಾಗಿದೆ.…