ಪೋಷಕರೇ ಎಚ್ಚರ! ಎಚ್ಚರ! ಪೋಷಕರು ನೋಡಲೇಬೇಕಾದ ಸ್ಟೋರಿ: ಚಾಕೊಲೇಟ್ ನಲ್ಲಿ ಡ್ರಗ್ಸ್ ಮಿಕ್ಸ್ ಮಾಡಿ ಮಾರಾಟ!

ಮಂಗಳೂರು: ನಗರದಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೈಲ್ಯಾಂಡ್​​​​ ಬಳಿಯ ಅಂಗಡಿಯಲ್ಲಿ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ನರ್(45) ಬಾಂಗ್ ಮಿಶ್ರಿ ಚಾಕೊಲೇಟ್ ಮಾರುತ್ತಿದ್ದನು. ಈತನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಬಳಿ ಇದ್ದ 5,500 ರೂ. ಮೌಲ್ಯದ ಬಾಂಗ್ ಚಾಕೊಲೇಟ್ ಜಪ್ತಿ ಮಾಡಿದ್ದಾರೆ. ಕಾರ್ ಸ್ಟ್ರೀಟ್ ಬಳಿ ಬಾಂಗ್ ಮಿಶ್ರಿ ಚಾಕೊಲೇಟ್ ಮಾರುತ್ತಿದ್ದ ಮನೋಹರ್ ಶೇಟ್ (49) ನನ್ನು ಮಂಗಳೂರು ಉತ್ತರ ಠಾಣಾ ಬಂಧಿಸಿದ್ದಾರೆ. ಆರೋಪಿಯಿಂದ 48,000 ರೂ. ಮೌಲ್ಯದ ಬಾಂಗ್ ಚಾಕೊಲೇಟ್​​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ (45) ಹಾಗೂ ಮಂಗಳೂರಿನ ಕಾರ್ ಸ್ಟ್ರೀಟ್ ನಿವಾಸಿ ಮನೋಹರ್ ಶೇಟ್ (49) ಪೊಲೀಸರು ವಶಕ್ಕೆ ಪಡೆದ ಆರೋಪಿಗಳಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರದ ಕಾರ್ ಸ್ಟ್ರೀಟ್ ಹಾಗೂ ಹೈಲ್ಯಾಂಡ್ ಎಂಬಲ್ಲಿನ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಚಾಕ್ಲೇಟ್‍ಗಳು ಪತ್ತೆಯಾಗಿವೆ. ಇವುಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ರಹಸ್ಯವಾಗಿ ಮಾರಾಟ ಮಾಡಲಾಗುತ್ತಿತ್ತು. ಉತ್ತರ ಭಾರತದಿಂದ ಇವುಗಳನ್ನು ತರಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Related posts

Leave a Comment