ಭಾರಿ ಕಂದಕ್ಕಕ್ಕೆ ಬಿದ್ದ ಲಾರಿ, ಪವಾಡ ಸದೃಡ್ಯ ರೀತಿಯಲ್ಲಿ ಪಾರಾದ ಚಾಲಕ

ನೆಲಮಂಗಲ: ತುಮಕೂರಿನಿಂದ ಬೆಂಗಳೂರು ಮಾರ್ಗವಾಗಿ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಬಿದ್ದಿದ್ದು ಲಾರಿ ಸಹಾಯಕನಿಗೆ ಗಂಭೀರ ಗಾಯವಾಗಿದ್ದು ಚಾಲಕ ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದ ರಸ್ತೆ ಕಂದಕಕ್ಕೆ ಲಾರಿ ಉರುಳಿ ಬಿದ್ದಿದೆ. ಘಟನೆ ವೇಳೆ ಲಾರಿ ಎಡಭಾಗದಲ್ಲಿ ಕುಳಿತಿದ್ದ ಸಹಾಯಕ ಗಂಭೀರ ಗಾಯಕ್ಕೆ ತುತ್ತಾಗಿದ್ದಾದ್ದು, 28 ವರ್ಷದ ಸಂತೋಷ್‌ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕಾಮಗಾರಿ ವಿಳಂಭ ಆರೋಪ: ಇನ್ನೂ ಹೆದ್ದಾರಿ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು ನಾಲ್ಕು ಪಥದ ರಸ್ತೆಯಿಂದ ಹತ್ತು ಪಥದ ರಸ್ತೆಗೆ ಮೇಲ್ದರ್ಜೆಗೆ ಏರಿಸಲು ಕಾಮರಾರಿ ಆರಂಭವಾಗಿದೆ. ಕಳೆದ ಎರಡು ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದು ಕೆಲಸ ಮಾತ್ರ ಆಮೆಗತಿಯಲ್ಲಿ ನಡೆಯುತ್ತಿದೆ. ಹೆಚ್ಚಾದ ಅಪಘಾತಗಳು: ರಸ್ತೆ ಕಾಮಗಾರಿ ಆರಂಭವಾದಾಗಿನಿಂದಲೂ ಅಪಘಾತಗಳ…

Read More