ಕಾಂಗ್ರೆಸ್‌ನವರು ಗೆದ್ದ ಅಹಂನಲ್ಲಿ ಇದ್ದಾರೆ, ಪಕ್ಷ ವಿಸರ್ಜನೆ ಪ್ರಶ್ನಿಸುತ್ತಿರುವವರಿಗೆ ತರಾಟೆಗೆ ತೆಗೆದುಕೊಂಡ ಹೆಚ್‌ಡಿ ಕುಮಾರಸ್ವಾಮಿ

ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋತರೆ @JanataDal_S ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಅವರು ಯಾವಾಗ ವಿಸರ್ಜನೆ ಮಾಡುತ್ತಾರೆ? ಪಕ್ಷಕ್ಕೆ ಯಾವಾಗ ಅಂತಿಮ ಸಂಸ್ಕಾರ ಮಾಡುತ್ತಾರೆ? ಎಂದು ಕೆಲ ಅರೆಬೆಂದ ಸಚಿವರು, ಶಾಸಕರು ಸಲ್ಲದ ಹೇಳಿಕೆಗಳನ್ನು ನೀಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಅವರೆಲ್ಲರ ಅಜ್ಞಾನಕ್ಕೆ ನನ್ನ ಪ್ರಗಾಢ ಸಾಂತ್ವನವಿದೆ. ಅವರ ಕನ್ನಡ ಭಾಷಾಜ್ಞಾನದ ಬಗ್ಗೆ ಕಾಳಜಿ ಇದೆ. ಆ ಮಹಾಶಯರು ನನ್ನ ಹೇಳಿಕೆಗಳನ್ನೊಮ್ಮೆ ತಿಳಿಯಲಿ. ಪತ್ರಿಕೆಗಳಲ್ಲಿ ಪ್ರಕಟವಾಗಿವೆ, ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿವೆ. ಕನ್ನಡ ಓದಲು ಬಾರದಿದ್ದರೆ ನನ್ನ ಬಳಿ ಬರಲಿ, ಮನದಟ್ಟು ಆಗುವ ರೀತಿ ಹೇಳುತ್ತೇನೆ.…

Read More